Home Uncategorized ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಅಡಿಗಲ್ಲು ಹಾಕಿದ್ದು  ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ, ಇದರ ಸಂಪೂರ್ಣ...

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಅಡಿಗಲ್ಲು ಹಾಕಿದ್ದು  ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ, ಇದರ ಸಂಪೂರ್ಣ ಕ್ರೆಡಿಟ್ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕು: ಸಿಎಂ ಬೊಮ್ಮಾಯಿ

7
0
bengaluru

ಮಂಡ್ಯ ಅಂದ್ರೆ ಇಂಡಿಯಾ, ಮೋದಿಯವರನ್ನು ವಿಶ್ವನಾಯಕ ಎಂದು ಕರೆಯಲು ಕಾರಣವಿದೆ. ವಿರೋಧಿ ರಾಷ್ಟ್ರಗಳಲ್ಲಿನ ಜನ ಕೂಡ ಮೋದಿಯನ್ನು ಒಪ್ಪಿಕೊಂಡಿದ್ದಾರೆ. ಅಮೆರಿಕ, ಚೀನಾ ನಾಗರಿಕರು ಕೂಡ ವಿಶ್ವನಾಯಕ ಎಂದು ಕರೆದಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.  ಮಂಡ್ಯ: ಮಂಡ್ಯ ಅಂದ್ರೆ ಇಂಡಿಯಾ, ಮೋದಿಯವರನ್ನು ವಿಶ್ವನಾಯಕ ಎಂದು ಕರೆಯಲು ಕಾರಣವಿದೆ. ವಿರೋಧಿ ರಾಷ್ಟ್ರಗಳಲ್ಲಿನ ಜನ ಕೂಡ ಮೋದಿಯನ್ನು ಒಪ್ಪಿಕೊಂಡಿದ್ದಾರೆ. ಅಮೆರಿಕ, ಚೀನಾ ನಾಗರಿಕರು ಕೂಡ ವಿಶ್ವನಾಯಕ ಎಂದು ಕರೆದಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 

2014ರಲ್ಲಿ ಮೋದಿ ಪ್ರಧಾನಿಯಾದ ಮೇಲೆ ದೇಶ ಅಭಿವೃದ್ಧಿ ಆಗುತ್ತಿದೆ. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಗೆ 2014ರಲ್ಲಿ ಶಂಕುಸ್ಥಾಪನೆ ಹಾಕಿದ್ದು ಮೋದಿಯವರು, ನಂತರ ಅದರ ಕಾಮಗಾರಿಯೂ ಪ್ರಧಾನ ಮಂತ್ರಿ ಮೋದಿಗಳ ನೇತೃತ್ವದಲ್ಲಿ ಆಗುತ್ತಾ ಸಾಗಿತು. ಇದೀಗ ಉದ್ಘಾಟನೆಯಾಗುತ್ತಿದೆ.

ವಿಪಕ್ಷಗಳು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿವೆ. ಅಡಿಗಲ್ಲು ಹಾಕಿ ಉದ್ಘಾಟನೆ ಮಾಡುತ್ತಿರುವುದು ಮೋದಿ ಸರ್ಕಾರ. ಡಬಲ್​ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆ ಪುನಾರಂಭ ಮಾಡಿದ್ದು ಬಿಜೆಪಿ.

ಕಿಸಾನ್ ಸಮ್ಮಾನ್ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ. ಮಂಡ್ಯದ 2 ಲಕ್ಷಕ್ಕೂ ಹೆಚ್ಚು ಜನ ಯೋಜನೆ ಲಾಭ ಪಡೆದಿದ್ದಾರೆ. ಬಿಜೆಪಿಯಿಂದ ಮಾತ್ರ ಭಾರತದ ಅಭಿವೃದ್ಧಿ ಸಾಧ್ಯ. ಎಲ್ಲ ಪಕ್ಷಗಳ ಅಭಿವೃದ್ಧಿ ರಿಪೋರ್ಟ್ ನೋಡಿ ನೀವು ಬೆಂಬಲ ನೀಡಿ. ಮುಂದಿನ ದಿನಗಳಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಆಶೀರ್ವದಿಸಿ ಎಂದರು.

bengaluru

ನರೇಂದ್ರ ಮೋದಿ ನಾಯಕತ್ವ ಹೊಗಳಿದ ಮುಖ್ಯಮಂತ್ರಿ: ಸಿಎಂ ಬಸವರಾಜ ಬೊಮ್ಮಾಯಿ ನರೇಂದ್ರ ಮೋದಿ ನಾಯಕತ್ವ ಕೊಂಡಾಡಿದ್ದಾರೆ. ಪಾಕಿಸ್ತಾನ, ಚೀನಾ ನಾಗರಿಕರಿಗೂ ನರೇಂದ್ರ ಮೋದಿ ಮೆಚ್ಚುಗೆಯಾಗಿದ್ದಾರೆ. ಮೋದಿ ರೀತಿ ನಾಯಕ ಬೇಕು ಅಂತಿದ್ದಾರೆ ಪಾಕಿಸ್ತಾನದ ಜನ. ಮೋದಿ ವಿಶ್ವ ನಾಯಕ ಅಂತಾ ಹೊಗಳುತ್ತಾರೆ ಚೀನಾದವರು. ಅಮೆರಿಕ ಪ್ರಜೆಗಳಿಂದಲೂ ನರೇಂದ್ರ ಮೋದಿಗೆ ಬಹುಪರಾಕ್ ಹೇಳಲಾಗಿದೆ ಎಂದು ಮಂಡ್ಯ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮೋದಿಯವರನ್ನು ಕೊಂಡಾಡಿದರು.

ಪ್ರಧಾನಮಂತ್ರಿಯವರು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ದೇಶಕ್ಕೆ ಸಮರ್ಪಿಸಿದ್ದಾರೆ. ಈ ಯೋಜನೆಯು ರಾಷ್ಟ್ರೀಯ ಹೆದ್ದಾರಿ 275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗವನ್ನು 6 ಪಥದಲ್ಲಿ ಅಭಿವೃದ್ಧಿಪಡಿಸುವುದನ್ನು ಒಳಗೊಂಡಿದೆ. 118 ಕಿ.ಮೀ ಉದ್ದವನ್ನು ಹೊಂದಿದೆ. ಈ ಯೋಜನೆಯನ್ನು ಸುಮಾರು 8480 ಕೋಟಿ ರೂ.ಗಳ ಒಟ್ಟು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು ಬೆಂಗಳೂರು- ಮೈಸೂರು ನಡುವೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಬೆಂಗಳೂರು ಮತ್ತು ಮೈಸೂರು ನಡುವೆ ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಗಳವರೆಗೆ ಈ ಎಕ್ಸ್ ಪ್ರೆಸ್ ವೇ ಮೂಲಕ ತಲುಪಬಹುದಾಗಿದೆ.

bengaluru

LEAVE A REPLY

Please enter your comment!
Please enter your name here