Home Uncategorized ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ- ಡಿಕೆ ಸುರೇಶ್ ಕಿಡಿ

ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ- ಡಿಕೆ ಸುರೇಶ್ ಕಿಡಿ

27
0
Advertisement
bengaluru

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ವೇಳೆ ತಮ್ಮನ್ನು ಆಹ್ವಾನಿಸದೇ ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆ ಮಾಚಲಾಗಿದೆ ಎಂದು ಸಂಸದ ಡಿ. ಕೆ. ಸುರೇಶ್ ಕಿಡಿಕಾರಿದ್ದಾರೆ. ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ವೇಳೆ ತಮ್ಮನ್ನು ಆಹ್ವಾನಿಸದೇ ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆ ಮಾಚಲಾಗಿದೆ ಎಂದು ಸಂಸದ ಡಿ. ಕೆ. ಸುರೇಶ್ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಫೇಸ್ ಬುಕ್ ನಲ್ಲಿ  ಬಹಿರಂಗ ಪತ್ರ ಬರೆದಿರುವ ಡಿ.ಕೆ ಸುರೇಶ್, ತಾವು ಈ ದಿನ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟಿಸಿದ್ದೀರಿ. ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಕನಿಷ್ಟ ಸೌಜನ್ಯ ತೋರದಿರುವುದಕ್ಕೆ  ತಮಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ. ಈ ರಾಷ್ಟ್ರೀಯ ಹೆದ್ದಾರಿಯ ಬಹುಭಾಗವು ನಾನು ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾದುಹೋಗಿದ್ದು, ಇಲ್ಲಿನ ಜನತೆ ನನ್ನನ್ನು ತಮ್ಮ ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಆದರೆ ನಿಮ್ಮ ಕ್ಷುಲ್ಲಕ ರಾಜಕಾರಣವು ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆಮಾಚಿದೆ ಎಂದಿದ್ದಾರೆ.

ಈ ರಾಷ್ಟ್ರೀಯ ಹೆದ್ದಾರಿಯ ಸುಮಾರು ಶೇ. 30 ರಷ್ಟುಕಾಮಗಾರಿಯು ಇನ್ನೂ ಬಾಕಿ ಇರುವುದು ನಿಮ್ಮ ಗಮನದಲ್ಲಿದೆ ಎಂದು ಭಾವಿಸಿದ್ದೇನೆ. ಆದರೂ ನೀವು ಈ ಅಪೂರ್ಣ ಯೋಜನೆಯನ್ನು ಕೇವಲ ಚುನಾವಣಾ ಗಿಮಿಕ್ ಗಾಗಿ  ಇಂದು ಉದ್ಘಾಟಿಸಿದ್ದೀರಿ.  2013 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಅಭಿವೃದ್ಧಿ ಪಡಿಸಲು ಮೊದಲು ಪ್ರಸ್ತಾವನೆ ಸಲ್ಲಿಸಿದ್ದನ್ನು ತಮಗೆ ನೆನಪಿಸಬಯಸುತ್ತೇನೆ. ಅಲ್ಲದೇ ರೈತರ ಭೂಮಿ ಸುಗಮ ಸ್ವಾಧೀನಕ್ಕೆ ಭೂ ಸ್ವಾಧೀನ ಕಾಯಿದೆಗೆ ತಿದ್ದುಪಡಿ ತರದೇ ಹೋಗಿದ್ದರೆ ಈ ಯೋಜನೆ ಇಷ್ಟು ಸುಲಭವಾಗಿ ಕಾರ್ಯಸಾಧು ಆಗುತ್ತಿರಲಿಲ್ಲ ಎಂಬುದನ್ನು ನಾವು ಮರೆಯಬಾರದು. ಇದರ ಸಂಪೂರ್ಣ ಶ್ರೇಯಸ್ಸು  ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಸಲ್ಲಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಅಭಿವೃದ್ಧಿಯ ಪ್ರದರ್ಶನ ವೀಕ್ಷಿಸಿದ ಪ್ರಧಾನಿ

bengaluru bengaluru

ಇನ್ನು ಕೇಂದ್ರಕ್ಕೆ ಅತಿಹೆಚ್ಚು ತೆರಿಗೆ ಪಾವತಿಸುವ ಎರಡನೇ ದೊಡ್ಡ ರಾಜ್ಯ ಕರ್ನಾಟಕದ ಸುಮಾರು 5,200 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯು ಪ್ರಧಾನಿ ಕಚೇರಿ ಹಾಗೂ ನೀತಿ ಆಯೋಗದ ಮುಂದೆ ಕಳೆದ 8 ವರ್ಷಗಳಿಂದ ಧೂಳು ಹಿಡಿಯುತ್ತಾ ಕೂತಿದೆ. ಈ ಕುರಿತು ನಿಮ್ಮ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಕರ್ನಾಟಕ ಅಭಿವೃದ್ಧಿ ವಿರುದ್ದದ ನಿಮ್ಮ ನಿಲುವು ಹಾಗೂ ಮಲತಾಯಿ ಧೋರಣೆಗೆ ಹಿಡಿದ ಕೈಗನ್ನಡಿ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದ ಅಪೂರ್ಣ ಯೋಜನೆಗಳನ್ನು ಉದ್ಘಾಟಿಸುತ್ತಿರುವುದು ಕರ್ನಾಟಕದ ಜನತೆಯನ್ನು ಹೇಗಾದರೂ ವಂಚಿಸಿ ಚುನಾವಣಾ ಗೆಲುವು ಸಾಧಿಸಬಹುದು ಎನ್ನುವ ನಿಮ್ಮ ಹತಾಶ ಪ್ರಯತ್ನಕ್ಕೆ ಹಿಡಿದ ಕೈಗನ್ನಡಿ. ನಿಮ್ಮ ಈ ವಿಕೃತ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.


bengaluru

LEAVE A REPLY

Please enter your comment!
Please enter your name here