ಬೆಂಗಳೂರು:
ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಕೋಲೇ ಔಟ್ನ ಸಿಲ್ಕ್ ಬೋರ್ಡ್ ಮನೆಯಲ್ಲಿ ವಾಸವಾಗಿದ್ದ ಅವರು ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ನಿವೃತ್ತರಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದು, ತಮ್ಮ ಸಾವಿಗೆ ತಾವೇ ಕಾರಣ ಎಂದು ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.