Home ಕರ್ನಾಟಕ ಬೆಂಗಳೂರು | ವೀಸಾ ಅವಧಿ ಮುಗಿದರೂ ನಗರದಲ್ಲಿ ವಾಸ : ವಿದೇಶಿಯರ ನಿವಾಸಗಳ ಮೇಲೆ ಸಿಸಿಬಿ...

ಬೆಂಗಳೂರು | ವೀಸಾ ಅವಧಿ ಮುಗಿದರೂ ನಗರದಲ್ಲಿ ವಾಸ : ವಿದೇಶಿಯರ ನಿವಾಸಗಳ ಮೇಲೆ ಸಿಸಿಬಿ ದಾಳಿ

7
0

ಬೆಂಗಳೂರು: ವೀಸಾ ಅವಧಿ ಮುಗಿದ ಬಳಿಕವೂ ನಗರದಲ್ಲಿ ಅಕ್ರಮವಾಗಿ ವಾಸವಿರುವ ವಿದೇಶಿ ಪ್ರಜೆಗಳ ನಿವಾಸಗಳ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ಕೈಗೊಂಡಿರುವುದಾಗಿ ವರದಿಯಾಗಿದೆ.

ಪಾಸ್‍ ಪೋರ್ಟ್ ಮತ್ತು ವೀಸಾ ಅವಧಿ ಮುಗಿದಿದ್ದರೂ ಸಹ ಕೆಲ ವಿದೇಶಿ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ವಾಸವಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಶಿವಾಜಿನಗರ ಮತ್ತು ರಾಮಮೂರ್ತಿ ನಗರದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮವಾಗಿ ನೆಲೆಸಿರುವ ಆಫ್ರಿಕಾ ಸೇರಿದಂತೆ ವಿವಿಧ ವಿದೇಶಿ ಪ್ರಜೆಗಳ ವೀಸಾ ಮತ್ತು ಪಾಸ್‍ ಪೋರ್ಟ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿ, ಬ್ಯುಸಿನೆಸ್ ವೀಸಾ ಪಡೆದು ನಗರಕ್ಕೆ ಆಗಮಿಸುವ ಕೆಲ ವಿದೇಶಿಯರು ತಮ್ಮ ವೀಸಾ ಅವಧಿ ಮುಗಿದಿದ್ದರೂ ತಮ್ಮ ದೇಶಗಳಿಗೆ ಹಿಂದಿರುಗದೆ ಅಕ್ರಮವಾಗಿ ನೆಲೆಸಿ ಮಾದಕವಸ್ತು ಮಾರಾಟ ಮತ್ತು ಇನ್ನಿತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿರುವುದಾಗಿ ಸಿಸಿಬಿ ಪೊಲೀಸರು ಹೇಳಿದ್ದಾರೆ.

LEAVE A REPLY

Please enter your comment!
Please enter your name here