Home Uncategorized ಬೆಂಗಳೂರು: ಶಾಲೆ-ಕಾಲೇಜು ದೋಚುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ!

ಬೆಂಗಳೂರು: ಶಾಲೆ-ಕಾಲೇಜು ದೋಚುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ!

53
0

ಶಾಲಾ-ಕಾಲೇಜುಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಕಳ್ಳರನ್ನು ಜ್ಞಾನಭಾರತಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬೆಂಗಳೂರು: ಶಾಲಾ-ಕಾಲೇಜುಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಕಳ್ಳರನ್ನು ಜ್ಞಾನಭಾರತಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ತಮಿಳುನಾಡಿನ ಸೇಲಂ ಜಿಲ್ಲೆಯ ನಿವಾಸಿಗಳಾದ ಅಣ್ಣಾ ದೊರೈ (42), ವೀರಮಲೈ ಅಲಿಯಾಸ್ ಕುಮಾರ್ (40) ಮತ್ತು ಬಾಬು (34) ಎಂದು ಗುರುತಿಸಲಾಗಿದೆ.

ಫೆಬ್ರವರಿ 10 ರಂದು ನಾಗದೇವನಹಳ್ಳಿಯ ವಿಎಸ್‌ಎಸ್ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ದುಷ್ಕರ್ಮಿಗಳು ರೂ. 5 ಲಕ್ಷ ಮತ್ತು ಕೆಲವು ಎಲೆಕ್ಟ್ರಾನಿಕ್ ವಸ್ತುಗಳನ್ನು ಕದ್ದೊಯ್ದಿದ್ದರು. ಈ ಸಂಬಂಧ ಶಾಲೆಯ ಅಕೌಂಟೆಂಟ್ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿ ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ.

ಆರೋಪಿಗಳು ಕೇವಲ ಶಾಲಾ-ಕಾಲೇಜುಗಳನ್ನು ಮಾತ್ರ ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜನವರಿ ತಿಂಗಳಿನಲ್ಲಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದರೋಡೆಕೋರರು ಜನವರಿ ಮತ್ತು ಮಾರ್ಚ್ ತಿಂಗಳ ನಡವೆ ಕಳ್ಳತನ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಣ ಸಿಗುತ್ತಿತ್ತು ಎಂಬುದನ್ನು ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ.

2001 ರಿಂದಲೂ ಶಾಲೆ-ಕಾಲೇಜುಗಳನ್ನು ಆರೋಪಿಗಳು ದೋಚುತ್ತಲೇ ಬಂದಿದ್ದು, ಅಂದಿನಿಂದ ಒಂದು ಪ್ರಕರಣದಲ್ಲೂ ಬಂಧನಕ್ಕೊಳಗಾಗದೆ ತಲೆಮರೆಸಿಕೊಂಡಿದ್ದಾರೆ. ನಗರ ಮತ್ತು ಸುತ್ತಮುತ್ತ ವರದಿಯಾದ 12 ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಇದೀಗ ಮೂವರನ್ನು ಬಂಧಕ್ಕೊಳಪಡಿಸಲಾಗಿದೆ. ಆರೋಪಿಗಳಿಂದ ರೂ.5 ಲಕ್ಷ ಮೌಲ್ಯದ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here