Home Uncategorized ಬೆಂಗಳೂರು: ಶೇ. 60ರಷ್ಟು ಬಿಬಿಎಂಪಿ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆಯೇ ಇಲ್ಲ!

ಬೆಂಗಳೂರು: ಶೇ. 60ರಷ್ಟು ಬಿಬಿಎಂಪಿ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆಯೇ ಇಲ್ಲ!

4
0
Advertisement
bengaluru

ಇತ್ತೀಚಿಗೆ ಬೆಂಕಿ ಹೊತ್ತಿಕೊಂಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ  ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಕಟ್ಟಡದಲ್ಲಿ ನಿಯಮಗಳ ಪ್ರಕಾರ ಅಗ್ನಿ ಸುರಕ್ಷತಾ ವ್ಯವಸ್ಥೆ ಹೊಂದಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಪ್ರಯೋಗಾಲಯದಲ್ಲಿ ಕೆಲಸ ಮಾಡುತ್ತಿದ್ದ ಒಂಬತ್ತು ಸಿಬ್ಬಂದಿಗೆ ಬೆಂಕಿಯಿಂದ ಸುಟ್ಟ ಗಾಯಗಳಾಗಿವೆ. ಬೆಂಗಳೂರು: ಇತ್ತೀಚಿಗೆ ಬೆಂಕಿ ಹೊತ್ತಿಕೊಂಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ  ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಕಟ್ಟಡದಲ್ಲಿ ನಿಯಮಗಳ ಪ್ರಕಾರ ಅಗ್ನಿ ಸುರಕ್ಷತಾ ವ್ಯವಸ್ಥೆ ಹೊಂದಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಪ್ರಯೋಗಾಲಯದಲ್ಲಿ ಕೆಲಸ ಮಾಡುತ್ತಿದ್ದ ಒಂಬತ್ತು ಸಿಬ್ಬಂದಿಗೆ ಬೆಂಕಿಯಿಂದ ಸುಟ್ಟ ಗಾಯಗಳಾಗಿವೆ.

ರಾಷ್ಟ್ರೀಯ ಕಟ್ಟಡ ಸುರಕ್ಷತಾ ನಿಯಮಗಳ ಪ್ರಕಾರ, ಪರೀಕ್ಷೆ ಮತ್ತು ಪ್ರಯೋಗಗಳನ್ನು ಮಾಡುವ ಮೂರು ಅಥವಾ ಹೆಚ್ಚಿನ ಮಹಡಿಗಳು ಮತ್ತು ಪ್ರಯೋಗಾಲಯಗಳನ್ನು ಹೊಂದಿರುವ ಎಲ್ಲಾ ಕಟ್ಟಡಗಳು ಅಗ್ನಿ ಸುರಕ್ಷತಾ ಮೆಟ್ಟಿಲುಗಳನ್ನು ಹೊಂದಿರಬೇಕು. ಆದರೆ ಪಾಲಿಕೆಯ ಪ್ರಯೋಗಾಲಯದಲ್ಲಿ ಅಂತಹ ಮೆಟ್ಟಿಲು ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ನಗರದಾದ್ಯಂತ ಪಾಲಿಕೆಯ ಶೇ.60ಕ್ಕೂ ಹೆಚ್ಚು ಕಟ್ಟಡಗಳು ಅಂತಹ ಮೆಟ್ಟಿಲುಗಳಿಲ್ಲ. ಬೆಂಕಿ ಹೊತ್ತಿಕೊಂಡಾಗ ಪ್ರಯೋಗಾಲಯದಲ್ಲಿ ಅಗ್ನಿಶಾಮಕ ಉಪಕರಣಗಳು ಸಂಪೂರ್ಣವಾಗಿ ಇರಲಿಲ್ಲ. ಬೆಂಕಿ ನಂದಿಸಲು ಬೇರೆಡೆಯಿಂದ ಅಗ್ನಿಶಾಮಕ ಯಂತ್ರಗಳನ್ನು ತರಬೇಕಾಯಿತು. ಪಾಲಿಕೆಯ ಕಟ್ಟಡವು ಸಂಪೂರ್ಣ ಕಾರ್ಯಾಚರಣೆಯ ಅಗ್ನಿ ನಿರೋಧಕ ವ್ಯವಸ್ಥೆಯನ್ನು ಹೊಂದಿರಲಿಲ್ಲ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಂದ ಕಡ್ಡಾಯವಾದ ‘ನಿರಾಕ್ಷೇಪಣಾ ಪ್ರಮಾಣಪತ್ರ’ ಸಹ ಪಡೆದಿರಲಿಲ್ಲ ಎಂದು ಬಿಬಿಎಂಪಿ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಬಿಬಿಎಂಪಿ ಎಂಜಿನಿಯರ್‌ಗಳು ದಾಖಲೆಗಳೊಂದಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳ ಮುಂದೆ ಇನ್ನೂ ಹಾಜರಾಗಬೇಕಿದೆ ಎಂದು ಮೂಲಗಳು ತಿಳಿಸಿವೆ.ಪಾಲಿಕೆಯಿಂದ ಎಲ್ಲಾ ವಿವರಗಳನ್ನು ಪಡೆದ ನಂತರವೇ ನಾವು ನಮ್ಮ ತನಿಖೆಯನ್ನು ಪ್ರಾರಂಭಿಸುತ್ತೇವೆ ಎಂದು ಹಲಸೂರು ಗೇಟ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

bengaluru bengaluru

bengaluru

LEAVE A REPLY

Please enter your comment!
Please enter your name here