ಪ್ರಿಯಕರನ ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ. ಬೆಂಗಳೂರು: ಪ್ರಿಯಕರನ ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ.
ಮಾಡೆಲ್ ಆತ್ಮಹತ್ಯೆ ಹಿಂದೆ ಫೇಸ್ಬುಕ್ ಪ್ರಿಯಕರನಿಂದ ಲವ್ ಸೆಕ್ಸ್ ದೋಖಾ ಬೆಳಕಿಗೆ ಬಂದಿದೆ. 21/07/23ರಂದು ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ವಿದ್ಯಾಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಪ್ರಿಯಕರನೇ ಕಾರಣ ಎನ್ನುವ ಅಂಶ ಡೈರಿ ಹೇಳುತ್ತಿದೆ. ಡೈರಿಯಲ್ಲಿ ಆತ್ಮಹತ್ಯೆಗೂ ಮುನ್ನ ವಿದ್ಯಾಶ್ರೀ ಡೈರಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಪ್ರಿಯಕರ ಅಕ್ಷಯ್ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ವಿದ್ಯಾಶ್ರೀ ಡೆತ್‌ನೋಟ್‌ನಲ್ಲಿ ಪ್ರಿಯಕರನ ಹೆಸರು, ಕಾರಣ ಬರೆದಿಟ್ಟು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿ: ಪ್ರೇಮ ವೈಫಲ್ಯ: ಬಾಳೆಮಂಡಿ ವ್ಯಾಪಾರಿ ಆತ್ಮಹತ್ಯೆಗೆ ಶರಣು
ಆರೋಪಿ ಅಕ್ಷಯ್ ಹಾಗೂ ವಿದ್ಯಾಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರ ತನ್ನಿಂದ ದೂರ ಹೋಗುತ್ತಿದ್ದಾನೆ ಎಂದು ಅನುಮಾನಗೊಂಡ ವಿದ್ಯಾಶ್ರೀ ಆತ್ಮಹತ್ಯೆ ಹಾದಿ ಹಿಡಿದಿದ್ದಾಳೆ. ಯುವತಿ ಮನೆಯಲ್ಲಿ ಬುಧವಾರ ಡೆತ್‌ನೋಟ್ ಪತ್ತೆಯಾದ ಬೆನ್ನಲ್ಲೇ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ನಂತರ ಆರೋಪಿ ಅಕ್ಷಯ್‌ನನ್ನ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಸದ್ಯ ಸೋಲದೇವನಹಳ್ಳಿ ಠಾಣೆಯಲ್ಲಿಕೇಸ್ ದಾಖಲಾಗಿದೆ.
ಮಾಡೆಲ್ ಸಹ ಆಗಿದ್ದ ವಿದ್ಯಾಶ್ರೀ ಮತ್ತು ಅಕ್ಷಯ್ ಕಳೆದ ಒಂದು ವರ್ಷದಿಂದ ಪ್ರೀತಿ ಮಾಡುತ್ತಿದ್ದರು. ಅಕ್ಷಯ್ ವಿದ್ಯಾ ಬಳಿ 1.76 ಲಕ್ಷ ಹಣ ಪಡೆದುಕೊಂಡಿದ್ದ. ಕೊಟ್ಟ ಹಣ ಕೇಳಿದ್ದಕ್ಕೆ ವಿದ್ಯಾ ಮತ್ತು ಆಕೆಯ ಕುಟುಂಬದವರನ್ನ ಅವಾಚ್ಯ ಶಬ್ಧಗಳಿಂದ ಬೈಯುತ್ತಿದ್ದ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ವಿದ್ಯಾಶ್ರೀ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ನನ್ನಸಾವಿಗೆ ಅಕ್ಷಯ್ ಕಾರಣ ಅವನು ನನ್ನ ನಾಯಿತರ ಟ್ರೀಟ್ ಮಾಡುತ್ತಾ ಇದ್ದಾನೆ. ನನಗೆ ಕೊಡಬೇಕಾದ 1 ಲಕ್ಷದ 76 ಸಾವಿರ ದುಡ್ಡು ಕೇಳಿದಾರೆ ನನಗೆ ನನ್ನ ಪ್ಯಾಮಿಲಿಗೆ ಕೆಟ್ಟ ಕೆಟ್ಟ ಮಾತಲ್ಲಿ ಬೈದು ಪೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ನನ್ನ ಡಿಪ್ರೆಷನ್ಗೆ ಅಡಿಕ್ಟ್ ಮಾಡಿದ್ದಾನೆ. ಹೀಗಾಗಿ ನನಗೆ ಬದುಕಲು ಆಗುತ್ತಿಲ್ಲ. ಡೇ ಬೈ ಡೇ ನನಗೆ ತುಂಬಾ ಸ್ಟೇನ್ ಆಗುತ್ತಿದೆ. ಅಮ್ಮ ಗುರು ಮನು I am Sorry ದಯವಿಟ್ಟು ನನ್ನ ಕ್ಷಮಿಸಿ. ಎಲ್ಲಾ ಹುಡುಗಿಯಲ್ಲಿ ವಿನಂತಿ ದಯಬಿಟ್ಟು ಯಾರು ಲವ್ ಮಾಡಬೇಡಿ. Good bye this World ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿ: ಬೆಂಗಳೂರು: ಸತ್ಯಾಂಶ ಬೇರೆಯೇ ಇದೆ; ಆತ್ಮಹತ್ಯೆ ಮಾಡಿಕೊಂಡ ಆದಿತ್ಯ ಪ್ರಭು ತಾಯಿಯ ಅಳಲು!
ಎಂಸಿಎ ಬಳಿಕ ಮಾಡೆಲ್ ಜೊತೆಗೆ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ವಿದ್ಯಾಶ್ರೀಗೆ ಫೇಸ್ಬುಕ್ನಲ್ಲಿ ಅಭಿಮಾನಿಯ ತರ ಜಿಮ್ ಕೋಚ್ ಅಕ್ಷಯ್ ಪರಿಚಯನಾಗಿದ್ದ. ಬಳಿಕ ಪರಿಚಯ ಪ್ರೀತಿಯಾಗಿ ಮಾರ್ಪಟ್ಟಿತ್ತು. ನಂತರ ಇಬ್ಬರು ಪರಸ್ಪರ ಪ್ರೀತಿಸಿದ್ದು, ಹಲವೆಡೆ ಜೊತೆ ಜೊತೆಯಾಗಿ ಸುತ್ತಾಡಿದ್ದರು. ಅಲ್ಲದೇ ಅಕ್ಷಯ್ ಮಾಡೆಲ್ ಬಳಿ ಸಾಕಷ್ಟು ಹಣ ಪೀಕಿದ್ದ. ಬಳಿಕ ಅದೇನು ಆಯ್ತು ಏನೋ ಮೂರು ತಿಂಗಳ ಹಿಂದೆ ಪ್ರೀತಿಯಲ್ಲಿ ಬಿರುಕು ಉಂಟಾಗಿದ್ದು, ಅಕ್ಷಯ್ ಫೋನ್ ಕಾಲ್ ಗೂ ಸಿಗದೆ ನಾಟ್ ರೀಚಬಲ್ ಆಗಿದ್ದ. ಇದರಿಂದ ಮಾನಸಿಕನೊಂದು ಮಾಡೆಲ್ ವಿದ್ಯಾಶ್ರೀ ಜುಲೈ 21ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಮೀಸ್ ಆಂಧ್ರ ಕಾಂಪಿಟೇಷನ್ ನಲ್ಲಿ ವಿಜೇತಳಾಗಿದ್ದ ಮೃತ ವಿದ್ಯಾಶ್ರೀ ಬಸವೇಶ್ವರ ನಗರದಲ್ಲಿ ಜೀಮ್ ಟ್ರೈನರ್ ಆಗಿದ್ದ ಆರೋಪಿ ಅಕ್ಷಯ್‌ಗೆ ಹಣ ಕೊಟ್ಟಿದ್ದರ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ.