Home Uncategorized ಬೆಂಗಳೂರು: ಹೊಸ ವರ್ಷದ ಪಾರ್ಟಿ ವೇಳೆ ಗೆಳೆಯನಿಗೆ ಇರಿದ ಸ್ನೇಹಿತ

ಬೆಂಗಳೂರು: ಹೊಸ ವರ್ಷದ ಪಾರ್ಟಿ ವೇಳೆ ಗೆಳೆಯನಿಗೆ ಇರಿದ ಸ್ನೇಹಿತ

4
0
bengaluru

ಹೊಸ ವರ್ಷಾಚರಣೆಯ ಪಾರ್ಟಿ ವೇಳೆ ಪಾನಮತ್ತರಾಗಿದ್ದ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಸ್ನೇಹಿತನೊಬ್ಬ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು: ಹೊಸ ವರ್ಷಾಚರಣೆಯ ಪಾರ್ಟಿ ವೇಳೆ ಪಾನಮತ್ತರಾಗಿದ್ದ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಸ್ನೇಹಿತನೊಬ್ಬ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಪೀಣ್ಯ 4ನೇ ಬ್ಲಾಕ್ ನಿವಾಸಿ ಪ್ರಶಾಂತ್ ಎ (30) ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ಭಾನುವಾರ ಮುಂಜಾನೆ 1.30ರ ಸುಮಾರಿಗೆ ಘಟನೆ ನಡೆದಿದೆ.

ಪ್ರಕರಣ ಸಂಬಂಧ ಪೊಲೀಸರು ಚೂರಿಯಿಂದ ಇರಿದ ಪ್ರಶಾಂತ್ (31) ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆ.

ಸಂತ್ರಸ್ತ ವ್ಯಕ್ತಿ ಶನಿವಾರ ರಾತ್ರಿ ಪೀಣ್ಯ 4ನೇ ಬ್ಲಾಕ್‌ನಲ್ಲಿರುವ ಸ್ನೇಹಿತನ ಮನೆಗೆ ಹೋಗಿದ್ದು, ಈ ವೇಳೆ ಇಬ್ಬರೂ ಮದ್ಯ ಸೇವಿಸಿದ್ದಾರೆ. ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕುಪಿತನಾದ ಪ್ರಶಾಂತ್ ಸ್ನೇಹಿತನಿಗೆ ಇರಿದಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

bengaluru

LEAVE A REPLY

Please enter your comment!
Please enter your name here