Home Uncategorized ಬೆಳಗಾವಿಯಲ್ಲಿ ಎಲೆಕ್ಟ್ರಿಕ್ ವಾಹನ ಪ್ಲಾಂಟ್ ನಿರ್ಮಿಸಲು ರಷ್ಯಾದ ಕಂಪನಿ ಆಸಕ್ತಿ: ಮುರುಗೇಶ್ ನಿರಾಣಿ

ಬೆಳಗಾವಿಯಲ್ಲಿ ಎಲೆಕ್ಟ್ರಿಕ್ ವಾಹನ ಪ್ಲಾಂಟ್ ನಿರ್ಮಿಸಲು ರಷ್ಯಾದ ಕಂಪನಿ ಆಸಕ್ತಿ: ಮುರುಗೇಶ್ ನಿರಾಣಿ

13
0

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಘಟಕವನ್ನು ಸ್ಥಾಪಿಸಲು ರಷ್ಯಾದ ಕಂಪನಿಯೊಂದು ಆಸಕ್ತಿ ತೋರಿದ್ದು, ಬೆಳಗಾವಿಯಲ್ಲಿ ಸ್ಥಾಪಿಸುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಶುಕ್ರವಾರ ವಿಧಾನಸಭೆಗೆ ತಿಳಿಸಿದರು. ಬೆಳಗಾವಿ: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಘಟಕವನ್ನು ಸ್ಥಾಪಿಸಲು ರಷ್ಯಾದ ಕಂಪನಿಯೊಂದು ಆಸಕ್ತಿ ತೋರಿದ್ದು, ಬೆಳಗಾವಿಯಲ್ಲಿ ಸ್ಥಾಪಿಸುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಶುಕ್ರವಾರ ವಿಧಾನಸಭೆಗೆ ತಿಳಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ನಿರಾಣಿ, ಕಂಪನಿಯ ನಿಯೋಗವು ಇತ್ತೀಚೆಗೆ ತಮ್ಮನ್ನು ಭೇಟಿ ಮಾಡಿತು ಮತ್ತು ಸರ್ಕಾರವು 2ನೇ ಹಂತದ ತಯಾರಿಕಾ ಘಟಕವನ್ನು ಸ್ಥಾಪಿಸಲು ಮನವರಿಕೆ ಮಾಡಿದೆ. ಸದ್ಯದಲ್ಲೇ ಅಧಿಕಾರಿಗಳ ತಂಡ ಕಂಪನಿಯ ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸಲಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಅಭಯ ಪಾಟೀಲ್, ‘ಗಡಿ ವಿಚಾರದಲ್ಲಿ ನಿರ್ಣಯ ಅಂಗೀಕರಿಸುವುದು ಸಾಕಾಗುವುದಿಲ್ಲ ಮತ್ತು ಸ್ಥಳೀಯ ಕೈಗಾರಿಕೆಗಳು ಕೊಲ್ಲಾಪುರ-ಕಾಗಲ್ ಕೈಗಾರಿಕಾ ಪ್ರದೇಶಕ್ಕೆ ಸ್ಥಳಾಂತರಗೊಳ್ಳುತ್ತಿರುವ ಕಾರಣ ಈ ಪ್ರದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸೌಹಾರ್ದಯುತ ವಾತಾವರಣ ನಿರ್ಮಿಸಲು ಸರ್ಕಾರವನ್ನು ಒತ್ತಾಯಿಸಿದರು.

ನಗರದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 600 ಕೋಟಿ ರೂ. ಪ್ರಸ್ತಾವನೆ ಸರ್ಕಾರದ ಮುಂದೆ ಬಾಕಿ ಇದೆ. ಇದನ್ನು ತೆರವುಗೊಳಿಸಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದರು. ಇದಕ್ಕೆ ಉತ್ತರಿಸಿದ ನಿರಾಣಿ, ಬೆಂಗಳೂರಿನಿಂದ ಹೊರಗೆ ಹೊಸ ಕೈಗಾರಿಕೆಗಳನ್ನು ಸ್ಖಾಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಹೆಚ್ಚಿನ ಕೈಗಾರಿಕೆಗಳು ತಮ್ಮ ಘಟಕಗಳನ್ನು ಶ್ರೇಣಿ-2 ಮತ್ತು ಶ್ರೇಣಿ-3 ನಗರಗಳಲ್ಲಿ, ನಿರ್ದಿಷ್ಟವಾಗಿ ಬೆಳಗಾವಿಯಲ್ಲಿ ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು. ಗೋಲ್ಡ್ ಗ್ಲಾಸ್ ಎಂಬ ಕಂಪನಿಯು ಮೊದಲ ಹಂತದಲ್ಲಿ 2,000 ಕೋಟಿ ರೂಪಾಯಿ ಹೂಡಿಕೆ ಮಾಡುವ ಘಟಕವನ್ನು ಸ್ಥಾಪಿಸಿದೆ ಮತ್ತು ಎರಡನೇ ಹಂತದಲ್ಲಿ ಹೆಚ್ಚಿನ ಹೂಡಿಕೆಗೆ ಯೋಜಿಸುತ್ತಿದೆ ಎಂದು ಅವರು ಹೇಳಿದರು.

ಕೈಗಾರಿಕಾ ಅಭಿವೃದ್ಧಿಗಾಗಿ 700 ಎಕರೆ ರಕ್ಷಣಾ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕುರಿತು ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಅವರ ಪ್ರಶ್ನೆಗೆ, ‘ಸರ್ಕಾರವು ಈಗಾಗಲೇ ರಕ್ಷಣಾ ಸಚಿವಾಲಯದೊಂದಿಗೆ ಮಾತುಕತೆ ನಡೆಸಿದೆ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಗಮನಕ್ಕೂ ತರಲಾಗುವುದು ಎಂದು ನಿರಾಣಿ ಹೇಳಿದರು.

ಬೆಳಗಾವಿಯ ಜಮೀನಿಗೆ ಬದಲಾಗಿ ಖಾನಾಪುರ ಬಳಿ ಒಂದು ಸಾವಿರ ಎಕರೆಯನ್ನು ರಕ್ಷಣಾ ಇಲಾಖೆಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಭೂಮಿ ಲಭ್ಯವಾದ ನಂತರ, ಅದನ್ನು ಏರೋಸ್ಪೇಸ್, ​​ಸೆಮಿಕಂಡಕ್ಟರ್‌ಗಳು ಮತ್ತು ಇತರ ಹೊಸ-ಯುಗದ ಕೈಗಾರಿಕೆಗಳಿಗೆ ಸಂಬಂಧಿಸಿದ ಕೈಗಾರಿಕೆಗಳನ್ನು ಸ್ಥಾಪಿಸಲು ಬಳಸಲಾಗುತ್ತದೆ ಎಂದರು.

ಗುಜರಾತ್‌ನಲ್ಲಿ ಮಾಡಿದಂತೆ ವಲಯವಾರು ನಿರ್ದಿಷ್ಟ ಹೂಡಿಕೆಗಾಗಿ ರಾಜ್ಯಾದ್ಯಂತ ಎಂಟು ಆಯಕಟ್ಟಿನ ಸ್ಥಳಗಳನ್ನು ಗುರುತಿಸಲು ಶಾಸಕ ಕುಮಾರ್ ಬಂಗಾರಪ್ಪ ಸರ್ಕಾರಕ್ಕೆ ಸೂಚಿಸಿದರು.

LEAVE A REPLY

Please enter your comment!
Please enter your name here