ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಅವರು ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಬೆಳಗಾವಿ: ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಅವರು ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.
ಸದ್ಯ ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿಯಾಗಿರುವ ರೇಷ್ಮಾ ತಾಳಿಕೋಟಿ ಅವರು ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಪತಿ ಜಾಫರ್ ಫಿರ್ಜಾದೆ ಅವರು ಬೆಳಗಾವಿಯ ಆಜಂ ನಗರದಲ್ಲಿರುವ ತಮ್ಮ ಸಹೋದರನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಇದನ್ನು ಓದಿ: ಬೆಂಗಳೂರು: ರೈಲಿಗೆ ತಲೆಕೊಟ್ಟು ಆದಾಯ ತೆರಿಗೆ ಇಲಾಖೆ ಇನ್ಸ್ ಪೆಕ್ಟರ್ ಆತ್ಮಹತ್ಯೆ
ರೇಷ್ಮಾ ತಾಳಿಕೋಟಿ ಅವರು ಈ ಹಿಂದೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸಿಲ್ದಾರರಾಗಿ ಕಾರ್ಯನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಎಫ್ ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಜಾಫರ್ ಫಿರ್ಜಾದೆ ಅವರು ಅವರು ಇಂದು ಆಜಂ ನಗರದಲ್ಲಿರುವ ತಮ್ಮ ಸಹೋದರ ಆಸಿಫ್ ಅವರ ಮನೆಗೆ ತೆರಳಿ ಅಲ್ಲಿಯೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಾಫರ್ ಅವರು ಕಳೆದ ಕೆಲವು ತಿಂಗಳಿನಿಂದ ಡಿಪ್ರೆಶನ್ ಗೆ ಒಳಗಾಗಿದ್ದರು ಎನ್ನುವ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಶೇಖರ್ ಅವರು ಮಾಹಿತಿ ನೀಡಿದ್ದಾರೆ.