Home Uncategorized ಬೆಳಗಾವಿ: ತನ್ನ ಮೂವರು ಹೆಣ್ಣು ಮಕ್ಕಳಿಗೆ ಫಿನೈಲ್ ಕುಡಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಬೆಳಗಾವಿ: ತನ್ನ ಮೂವರು ಹೆಣ್ಣು ಮಕ್ಕಳಿಗೆ ಫಿನೈಲ್ ಕುಡಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

26
0

ಅಂತಾರಾಷ್ಟ್ರಿಯ ಮಹಿಳಾ ದಿನದಂದೇ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳಿಗೆ ವಿಷ ಉಳಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.  ಬೆಳಗಾವಿ: ಅಂತಾರಾಷ್ಟ್ರಿಯ ಮಹಿಳಾ ದಿನದಂದೇ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳಿಗೆ ವಿಷ ಉಳಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. 

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಜನತಾ ಪ್ಲ್ಯಾಟ್ ನಿವಾಸಿ 40 ವರ್ಷದ ಸರಸ್ವತಿ ಎಂಬುವರು ತನ್ನ ಮೂವರು ಹೆಣ್ಣುಮಕ್ಕಳಾದ 14 ವರ್ಷದ ಸೃಷ್ಟಿ, 8 ವರ್ಷದ ಸಾಕ್ಷಿ ಮತ್ತು 3 ವರ್ಷದ ಸಾನ್ವಿಗೆ ಫಿನೈಲ್ ಕುಡಿಸಿ ನಂತರ ತಾನೂ ಫಿನೈಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲೇ ಸರಸ್ವತಿ ಆತ್ಮಹತ್ಯೆಗೆ ಯತ್ನಿಸಿದ್ದು ಈ ವಿಷಯ ತಿಳಿದ ಕೂಡಲೇ ಕಚೇರಿ ಸಿಬ್ಬಂದಿ ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿದ್ದರಿಂದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮನೆಗೆ ನುಗ್ಗಿದ ಖದೀಮರು, ವಿದ್ಯಾರ್ಥಿನಿಗೆ ಚಾಕು ತೋರಿಸಿ ದರೋಡೆ

ಬೆಳಗಾವಿಯ ಅನಗೋಳದಲ್ಲಿ ಸರಸ್ವತಿ ಪತಿ ಅದೃಶ್ಯಪ್ಪ ಹಂಪಣ್ಣನವ ಸಲೂನ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು. ಇನ್ನು ಅದೃಶ್ಯಪ್ಪ ಅಧಿಕ ಪ್ರಮಾಣದಲ್ಲಿ ಸಾಲ ಮಾಡಿಕೊಂಡಿದ್ದನು. ಸಾಲ ತೀರಿಸಲಾಗದೆ ಅದೃಶ್ಯಪ್ಪ 15 ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದನು. ಕೈಯಲ್ಲಿ ಹಣವಿಲ್ಲದೆ ಕಂಗಲಾಗಿದ್ದ ಸರಸ್ವತಿ ಮುಂದೇನು ಮಾಡಬೇಕು ಎಂದು ತೋಚದೆ ಜಿಲ್ಲಾಧಿಕಾರಿಗಳ ಭೇಟಿಗೆ ಆಗಮಿಸಿದ್ದರು. 

ಆದರೆ ಅದಕ್ಕೂ ಮೊದಲೇ ಜ್ಯೂಸ್ ಎಂದು ಮಕ್ಕಳಿಗೆ ಫಿನೈಲ್ ಕುಡಿಸಿದ್ದರಿಂದ ನಾಲ್ವರು ಅಸ್ವಸ್ಥರಾಗಿದ್ದರು. ಇದನ್ನು ಗಮನಿಸಿದ ಸಿಬ್ಬಂದಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ನಾಲ್ವರ ಆರೋಗ್ಯ ಸ್ಥಿರವಾಗಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here