Home Uncategorized ಬೆಳಗಾವಿ: ವಿದ್ಯುತ್ ಪ್ರವಹಿಸಿ, ಒಂದೇ ಕುಟುಂಬದ ಮೂವರ ದುರ್ಮರಣ

ಬೆಳಗಾವಿ: ವಿದ್ಯುತ್ ಪ್ರವಹಿಸಿ, ಒಂದೇ ಕುಟುಂಬದ ಮೂವರ ದುರ್ಮರಣ

18
0

ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಬೆಳಗಾವಿ: ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಶಾಹುನಗರದಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದ ನಿವಾಸಿ ಈರಪ್ಪ ಗಂಗಪ್ಪ ರಾಥೋಡ (55), ಶಾಂತವ್ವ ಈರಪ್ಪ ರಾಥೋಡ (50) ಮತ್ತು ಅನ್ನಪೂರ್ಣ ಹೊನ್ನಪ್ಪ ರಾಥೋಡ (8) ಎಂದು ಗುರುತಿಸಲಾಗಿದೆ.

ಬೋರವೆಲ್ ಸ್ವಿಚ್ ಆನ್​ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದು ಈ ಅವಘಡ ಸಂಭವಿಸಿರುವುದಾಗಿ ಪ್ರಾಥಮಿಕ‌ ಮಾಹಿತಿ ಲಭ್ಯವಾಗಿದೆ. ಬೆಳಗಾವಿಯ‌ ಶಾಹು ನಗರದ 7ನೇ ಕ್ರಾಸ್‌ನ ನಿರ್ಮಾಣ ಹಂತದ ಮನೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ನಿರ್ಮಾಣ ಹಂತದ ಮನೆಗೆ ವಾಚ್‌ಮನ್ ಆಗಿ ರಾಥೋಡ್ ದಂಪತಿ ಕೆಲಸ ಮಾಡುತ್ತಿದ್ದರು. ಮೊಮ್ಮಗಳಾದ ಅನ್ನಪೂರ್ಣಳನ್ನು ಶಿಕ್ಷಣಕ್ಕಾಗಿ ತಮ್ಮ ಬಳಿ ಈ ದಂಪತಿ ಇಟ್ಟುಕೊಂಡಿದ್ದರು. ಬೆಳಿಗ್ಗೆ ಎಂದಿನಂತೆ ಕಟ್ಟಡಕ್ಕೆ ನೀರು ಹೊಡೆಯಲು ಅಜ್ಜ ಈರಪ್ಪ ಮೊಮ್ಮಗಳು ಅನ್ನಪೂರ್ಣಾಗೆ ಮೋಟರ್ ಆನ್​ ಮಾಡಲು ಹೇಳಿದ್ದಾರೆ. ಈ ವೇಳೆ ಅನ್ನಪೂರ್ಣ ಮೋಟರ್ ಆನ್​ ಮಾಡಲು ಹೋದಾಗ ಟೆಕ್ನಿಕಲ್​ ಸಮಸ್ಯೆ ಎದುರಾಗಿದೆ. ಬಳಿಕ ಹೊರಗೆ ಬಂದ ಬಾಲಕಿ ಮೋಟರ್ ವಾಯರ್ ಹಿಡಿದುಕೊಂಡು ತೆರಳಿದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ.

ಇದನ್ನೂ ಓದಿ: ಅಯ್ಯೋ ಕಂದಾ… ಮೊಬೈಲ್​ ಚಾರ್ಜರ್​ ಕಚ್ಚಿ 8 ತಿಂಗಳ ಹಸುಗೂಸು ದಾರುಣ ಸಾವು

ಮೊಮ್ಮಗಳ ಸ್ಥಿತಿ ಅರಿತ ಅಜ್ಜಿ ಶಾಂತವ್ವ ಹೊರಗೆ ಓಡಿ ಬಂದು ಬಾಲಕಿಯನ್ನು ಹಿಡಿದಿದ್ದಾರೆ. ಆಗ ಅಜ್ಜಿಗೂ ವಿದ್ಯುತ್ ತಾಗಿದೆ, ಇಬ್ಬರು ಒದ್ದಾಡುತ್ತಿರುವುದು ಕಂಡು ಧಾವಿಸಿದ ಅಜ್ಜ ಈರಪ್ಪಗೂ ವಿದ್ಯುತ್ ತಾಗಿದೆ. ಕರೆಂಟ್​ ಶಾಕ್​​ನಿಂದಾಗಿ ಸ್ಥಳದಲ್ಲೇ ಮೂವರು ಕೊನೆಯುಸಿರೆಳೆದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಧಾವಿಸಿದ ಎಪಿಎಂಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here