Home Uncategorized ಬೆಳಗಾವಿ: ಹಿಂಡಲಗಾ ಜೈಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ: ಸೌಕರ್ಯಗಳ ಪರಿಶೀಲನೆ

ಬೆಳಗಾವಿ: ಹಿಂಡಲಗಾ ಜೈಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ: ಸೌಕರ್ಯಗಳ ಪರಿಶೀಲನೆ

10
0
bengaluru

ಗೃಹ ಸಚಿವ ಆರಗ ಜ್ಞಾನೇಂದ್ರ  ಗುರುವಾರ ಒಂದು ಕಾಲದಲ್ಲಿ  ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದರು.   ಬೆಳಗಾವಿ: ಗೃಹ ಸಚಿವ ಆರಗ ಜ್ಞಾನೇಂದ್ರ  ಗುರುವಾರ ಒಂದು ಕಾಲದಲ್ಲಿ  ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದರು.  

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಕೇಂದ್ರ ಕಾರಾಗೃಹದಲ್ಲಿ 800ಕ್ಕೂ ಹೆಚ್ಚು ಕೈದಿಗಳಿದ್ದಾರೆ. ಇಲ್ಲಿ ಸಿಗುವ ಸೌಲಭ್ಯಗಳು ಮತ್ತು ಕೊರತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾಗಿ ತಿಳಿಸಿದರು.

ರಾಜ್ಯ ಸರ್ಕಾರ ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿಯ ತಾರತಮ್ಯ ಮಾಡುವುದಿಲ್ಲ. ಅದರ ಅಭಿವೃದ್ಧಿ ಬಗ್ಗೆ ನಿನ್ನೆಯೂ ಚರ್ಚಿಸಿದ್ದೇವೆ’ ಎಂದರು. ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಜ್ಞಾನೇಂದ್ರ ಹೇಳಿದರು. ಇಂದು ಬೆಳಗಾವಿಯ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ವೀರ ಸಾವರ್ಕರ್ ಅವರು 97 ದಿನಗಳ ಕಾಲ ಜೈಲಿನಲ್ಲಿ ಬಂದಿಯಾಗಿದ್ದ ಬಗ್ಗೆ ಉಲ್ಲೇಖ ಇರುವ ಬಂದೀಖಾನೆ ದಾಖಲೆಯ ಪರಿಶೀಲನೆ ನಡೆಸಲಾಯಿತು.#VeerSavarkar@CMofKarnataka pic.twitter.com/uCzwoJE6yo— Araga Jnanendra (@JnanendraAraga) December 29, 2022

bengaluru

LEAVE A REPLY

Please enter your comment!
Please enter your name here