Home High Court/ಹೈಕೋರ್ಟ್ ಭೂ ಸುಧಾರಣೆ ಕಾನೂನು (ತಿದ್ದುಪಡಿ) ಸುಗ್ರಿವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್‌

ಭೂ ಸುಧಾರಣೆ ಕಾನೂನು (ತಿದ್ದುಪಡಿ) ಸುಗ್ರಿವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್‌

69
0
Karnataka High Court

ಬೆಂಗಳೂರು:

ಸರ್ಕಾರ ಎರಡನೇ ಬಾರಿಗೆ ಜಾರಿಗೊಳಿಸಿದ ವಿವಾದಾತ್ಮಕ ಭೂ ಸುಧಾರಣೆ ಕಾನೂನು (ತಿದ್ದುಪಡಿ) ಸುಗ್ರೀವಾಜ್ಞೆಯ ಔಚಿತ್ಯವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಹೋರಾಟಗಾರ ಹಾಗೂ ಪತ್ರಕರ್ತ ನಾಗರಾಜ ಹೊಂಗಲ್‌ ಸಲ್ಲಿಸಿದ್ದ ತಿದ್ದುಪಡಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಓಕಾ ನೇತೃತ್ವದ ಪೀಠ ಸೋಮವಾರ ವಿಚಾರಣೆಗೆ ಅಂಗೀಕರಿಸಿತು.

ಸುಗ್ರೀವಾಜ್ಞೆಯಲ್ಲಿ ಕಾರ್ಪೋರೇಟ್ ಕಂಪೆನಿಗಳು, ಟ್ರಸ್ಟಗಳು ಖರೀದಿಸುವ ಜಮೀನಿನ ಪ್ರಮಾಣಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಇದು ಪರೋಕ್ಷವಾಗಿ ಜಮೀನು ಕಬಳಿಕೆಯನ್ನು ಉತ್ತೇಜಿಸುತ್ತದೆ. ಸಂವಿಧಾನದ ಮೂಲ ಸ್ವರೂಪಕ್ಕೂ ಧಕ್ಕೆ ತರುವಂಥದ್ದಾಗಿದೆ ಎಂದು ತಿದ್ದುಪಡಿ ಅರ್ಜಿಯಲ್ಲಿ ವಿವರಿಸಲಾಗಿದೆ.

ಅರ್ಜಿದಾರರ ಪರವಾಗಿ ರವೀಂದ್ರ ಡಿ.ಕೆ. ಅವರು ವಕಾಲತ್ತು ವಹಿಸಿದ್ದಾರೆ.

LEAVE A REPLY

Please enter your comment!
Please enter your name here