Home Uncategorized ಮಂಗಳೂರಿನಲ್ಲಿ ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ

ಮಂಗಳೂರಿನಲ್ಲಿ ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ

3
0
bengaluru

ಮಂಗಳೂರು: ಅಯ್ಯಪ್ಪ ಮಾಲಾಧಾರಿ (Ayyappa maladhari) ವಿದ್ಯಾರ್ಥಿ (student) ಮೇಲೆ ನಾಲ್ವರು ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಗಾಯಾಳು ವಿದ್ಯಾರ್ಥಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.  ಮಂಗಳೂರು ನಗರದ ಕಪಿತಾನಿಯೋ ಶಾಲೆಯ ವಿದ್ಯಾರ್ಥಿಗೆ ಹಲ್ಲೆ ಆರೋಪ ಮಾಡಲಾಗಿದೆ. ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಈ ಹಿಂದೆ ಹಲವು ಬಾರಿ ಗಲಾಟೆ ನಡೆದಿತ್ತು. ಗಲಾಟೆ ನಡೆಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು ಎಚ್ಚರಿಕೆ ನೀಡಿದ್ದರು. ಆದರೆ ಮತ್ತೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಹಕಾರಿ ಸಂಘದಲ್ಲಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ

ದಕ್ಷಿಣ ಕನ್ನಡ: ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಮೂಡುರು ವ್ಯವಸಾಯ ಸಹಕಾರಿ ಸಂಘದಲ್ಲಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ ಕೇಳಿಬಂದಿದೆ. ಸಹಕಾರಿ ಸಂಘದ ಕಚೇರಿಯಲ್ಲಿ ಸಿಬ್ಬಂದಿ ಮತ್ತು ಗ್ರಾಹಕರ ಮಧ್ಯೆ ಹೈಡ್ರಾಮ ನಡೆದಿದೆ. ಗ್ರಾಹಕರ ಹೆಸರಿನಲ್ಲಿ ಸಂಘದ ಕೆಲ ಪದಾಧಿಕಾರಿಗಳು ಸಾಲ ಪಡೆದ ಆರೋಪ ಮಾಡಲಾಗಿದೆ. ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಬ್ಯಾಂಕ್​ಗೆ ಬಂದು ಸಿಬ್ಬಂದಿಯನ್ನು ಗ್ರಾಹಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Techie Death: ಬೆಂಗಳೂರಿನಲ್ಲಿ ಕಾರಿನಲ್ಲೇ ಸಾಫ್ಟ್​ವೇರ್ ಎಂಜಿನಿಯರ್ ಆತ್ಮಹತ್ಯೆ

ಮಾತಿನ ಚಕಮಕಿ ನಡೆದು ಸಹಕಾರಿ ಸಂಘದ ಸಿಬ್ಬಂದಿಗೆ ಗ್ರಾಹಕರು ಗೂಸಾ ನೀಡಿದ್ದಾರೆ. ಈಗಾಗಲೇ ಗೋಲ್ ಮಾಲ್ ಪ್ರಕರಣ ಹೈ ಕೋರ್ಟ್ ‌ಮೆಟ್ಟಿಲೇರಿದೆ. ಎಂಟು ವಾರಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ಹೈ ಕೋರ್ಟ್ ಮಂಗಳೂರಿನ ಸಹಕಾರಿ ಸಂಘಗಳ ನಿಬಂಧಕರಿಗೆ ಸೂಚಿಸಿದೆ. ಈ ಮಧ್ಯೆ ಸಂಘದ ಕಚೇರಿಗೆ ಆಗಮಿಸಿ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

bengaluru

ಖಾಸಗಿ ವಸತಿ ಸಮುಚ್ಚಯದಲ್ಲಿ ತಪ್ಪಿದ ಭಾರೀ ಅಗ್ನಿ ಅವಘಡ

ಮಂಗಳೂರು: ಖಾಸಗಿ ವಸತಿ ಸಮುಚ್ಚಯದಲ್ಲಿ ಭಾರೀ ಅಗ್ನಿ ಅವಘಡ ತಪ್ಪಿರುವಂತಹ ಘಟನೆ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ಘಟನೆ ನಡೆದಿದೆ. ಫ್ಲಾಟ್​ನ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ. ಫ್ಲಾಟ್​​ನಲ್ಲಿ ಇಬ್ಬರು ದಂತ ವೈದ್ಯಕೀಯ ವಿದ್ಯಾರ್ಥಿನಿಯರಿದ್ದರು. ಬಟ್ಟೆಗೆ ಇಸ್ತ್ರಿ ಹಾಕಿ ಸ್ವಿಚ್ ಆಫ್ ಮಾಡಿದ್ದರೂ ಇಸ್ತ್ರಿ ಪೆಟ್ಟಿಗೆಯನ್ನು ಬೆಡ್ ನಲ್ಲಿರಿಸಿದ್ದರು. ಇಸ್ತ್ರಿ ಪೆಟ್ಟಿಗೆ ಬಿಸಿಗೆ ಬೆಡ್​ಗೆ ಬೆಂಕಿ ಬಿದ್ದು ಬೆಂಕಿ ಹಬ್ಬಿದೆ. ಹೊಗೆ ಕಂಡು ಪ್ಲಾಟ್ ಮ್ಯಾನೇಜರ್ ಶಾಹಿದ್ ಅಲರ್ಟ್ ಆಗಿದ್ದು, ತಕ್ಷಣ ವಿದ್ಯಾರ್ಥಿನಿಯರನ್ನ ಕರೆಸಿ ಬಾಗಿಲು ಓಪನ್ ಮಾಡಿಸಿದ್ದಾರೆ. ಬಳಿಕ ಕೊಠಡಿಗೆ ತೆರಳಿ ಶಾಹಿದ್ ಬೆಂಕಿ ಆರಿಸಿದ್ದಾರೆ. ಶಾಹೀದ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.

ಇದನ್ನೂ ಓದಿ: ರಾಮನಗರ: ಬೈಕ್​​ ವ್ಹೀಲಿಂಗ್​​ ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಲಾಂಗ್‌ನಿಂದ ಹಲ್ಲೆ

ಟೈರ್ ಸ್ಫೋಟಗೊಂಡು ಮರಕ್ಕೆ ಟಂಟಂ ವಾಹನ ಡಿಕ್ಕಿ, ಮಹಿಳೆ ಸಾವು

ಗದಗ: ಟೈರ್ ಸ್ಫೋಟಗೊಂಡು ಮರಕ್ಕೆ ಟಂಟಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಬಳಿ ನಡೆದಿದೆ. ಇನ್ನು ಘಟನೆಯಲ್ಲಿ ಎಂಟು ಪ್ರಯಾಣಿಕರಿಗೆ ಗಾಯವಾಗಿದ್ದು, ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

bengaluru

LEAVE A REPLY

Please enter your comment!
Please enter your name here