Home Uncategorized ಮಂಗಳೂರಿನಲ್ಲಿ ಬಿಜೆಪಿಯ 'ಪ್ರಗತಿ ರಥ' ಯಾತ್ರೆಗೆ ಚಾಲನೆ

ಮಂಗಳೂರಿನಲ್ಲಿ ಬಿಜೆಪಿಯ 'ಪ್ರಗತಿ ರಥ' ಯಾತ್ರೆಗೆ ಚಾಲನೆ

31
0
Advertisement
bengaluru

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ‘ಪ್ರಗತಿ ರಥ’ ಯಾತ್ರೆಗೆ ಸೋಮವಾರ ಇಲ್ಲಿನ ಕದ್ರಿ ಮೈದಾನದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ನೀಡಿದರು. ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ‘ಪ್ರಗತಿ ರಥ’ ಯಾತ್ರೆಗೆ ಸೋಮವಾರ ಇಲ್ಲಿನ ಕದ್ರಿ ಮೈದಾನದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ನೀಡಿದರು.

ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸುದರ್ಶನ್ ಮೂಡುಬಿದಿರೆ ತಿಳಿಸಿದರು.

ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ‘ಪ್ರಗತಿ ರಥ’ಗಳು ಸಂಚರಿಸಲಿವೆ.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ ಸೇರಿದಂತೆ ಪಕ್ಷದ ಕಾರ್ಪೊರೇಟರ್‌ಗಳು ಉಪಸ್ಥಿತರಿದ್ದರು.

bengaluru bengaluru

ಶುಕ್ರವಾರ (ಫೆ. 24) ಬೆಂಗಳೂರಿನಲ್ಲಿ ಬಿಜೆಪಿ ಪ್ರಗತಿ ರಥ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ 130 ರಥಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿರುವ ಸಾಧನೆಗಳನ್ನು ಜನರಿಗೆ ತಲುಪಿಸಲು ಈ ಯಾತ್ರೆ ಆರಂಭವಾಗಿದೆ. ಹೆಣ್ಣುಮಕ್ಕಳು ಬಡವರು, ಶಾಲಾ ಮಕ್ಕಳು ಎಲ್ಲರಿಗೂ ಮಾಹಿತಿ ತಲುಪಿಸಿ‌ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿಯಿಂದ ಯಾತ್ರೆ, ಸಮಾವೇಶ ನಡೆಯುತ್ತಿವೆ. ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ, ಜೆಡಿಎಸ್‌ ಪಂಚರತ್ನ ಯಾತ್ರೆ ನಡೆಸುತ್ತಿದ್ದು, ಈಗ ಬಿಜೆಪಿ ಪ್ರಗತಿ ರಥ ಯಾತ್ರೆ ಆರಂಭಿಸಿದೆ.


bengaluru

LEAVE A REPLY

Please enter your comment!
Please enter your name here