Home Uncategorized ಮಂಗಳೂರು: ಡ್ರಗ್ಸ್ ದಂಧೆ ನಡೆಸುತ್ತಿದ್ದ ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

ಮಂಗಳೂರು: ಡ್ರಗ್ಸ್ ದಂಧೆ ನಡೆಸುತ್ತಿದ್ದ ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

11
0
bengaluru

ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರು ವೈದ್ಯರನ್ನು ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರು ವೈದ್ಯರನ್ನು ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.

 
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 15 ವಿದ್ಯಾರ್ಥಿಗಳು ಮತ್ತು ಮೂರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ನಾವು ಶುಕ್ರವಾರ ಇನ್ನೂ ಕೆಲವು ವೈದ್ಯರು ಮತ್ತು ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದರು.
ಶುಕ್ರವಾರ ಖಾಸಗಿ ಕಾಲೇಜಿನ ಡೀನ್ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರನ್ನು ಭೇಟಿ ಮಾಡಿ ಮಾದಕ ದ್ರವ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಂಡಿರುವ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ: ಮಂಗಳೂರು: ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ 10  ವೈದ್ಯ-ವೈದ್ಯಕೀಯ ವಿದ್ಯಾರ್ಥಿಗಳ ಬಂಧನ

ಈ ಪ್ರಕರಣದಲ್ಲಿ ಇಲ್ಲಿನ ಹಿರಿಯ ವೈದ್ಯ ಡಾ.ಬಾಲಾಜಿ ಮತ್ತು ಅಪಘಾತ ವೈದ್ಯಾಧಿಕಾರಿ ಡಾ.ಸಮೀರ್ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.

ಆರೋಪಿಗಳು ನಗರದ ಬಂಟ್ಸ್ ಹೊಟೆಲ್ ಬಳಿ ಇದ್ದ ಫ್ಲಾಟ್ ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಜನರಿಗೆ ಗಾಂಜಾ ಮಾರಾಟ ಮಾಡ್ತುತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಫ್ಲಾಟ್ ಮೇಲೆ ದಾಳಿ ನಡೆಸಲಾಯಿತು. ದಾಳಿ ವೇಳೆ ಪೊಲೀಸರು 2 ಕೆ.ಜಿ (50,000 ರೂಪಾಯಿ ಮೌಲ್ಯದ) ಗಾಂಜಾ, 2 ಮೊಬೈಲ್ ಫೋನ್, 7,000 ಮೌಲ್ಯದ ನಗದು, ಡಿಜಿಟಲ್ ಉಪಕರಣಗಳು, ಟಾಯ್ ಗನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

LEAVE A REPLY

Please enter your comment!
Please enter your name here