ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯಲ್ಲಿ ಗುರುವಾರ ಬಜರಂಗ ದಳದ ಕಾರ್ಯಕರ್ತನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯಲ್ಲಿ ಗುರುವಾರ ಬಜರಂಗ ದಳದ ಕಾರ್ಯಕರ್ತನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ (36) ಎಂದು ಗುರುತಿಸಲಾಗಿದೆ.
ಪಾಣೆಮಂಗಳೂರಿನ ಹಳೆ ಸೇತುವೆಯ ಮೇಲೆ ಬಿಟ್ಟುಹೋಗಿದ್ದ ಬೈಕ್ ಅನ್ನು ಕಂಡು ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ: ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ ಪ್ರಕರಣ: ಮೂವರು ಪೊಲೀಸರ ವಶಕ್ಕೆ
ಹುಡುಕಾಟದ ಬಳಿಕ ಪೊಲೀಸರಿಗೆ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.