Home Uncategorized ಮಂಗಳೂರು: ಬಿಸಿಎಂ ಹಾಸ್ಟೆಲ್​ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಬಿಸಿಎಂ ಹಾಸ್ಟೆಲ್​ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

24
0

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಬಾಗ್ ಸಮೀಪ ಇರುವ ಬಾಲಕಿಯರ ಬಿಸಿಎಂ ಹಾಸ್ಟೆಲ್ ನ ರೂಂನಲ್ಲಿ ಬೆಂಗಳೂರು ಮೂಲದ ಸೋನಿಯಾ(17) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ… ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಬಾಗ್ ಸಮೀಪ ಇರುವ ಬಾಲಕಿಯರ ಬಿಸಿಎಂ ಹಾಸ್ಟೆಲ್ ನ ರೂಂನಲ್ಲಿ ಬೆಂಗಳೂರು ಮೂಲದ ಸೋನಿಯಾ(17) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಸುಳ್ಯ ಶಾರದಾ ಹೆಣ್ಣುಮಕ್ಕಳ ಪದವಿ ಪೂರ್ಣ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಸೋನಿಯಾ ನಿನ್ನೆ  ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ತಿರುವು: ಕೊಲೆ ಎಂದ ಶವಾಗಾರ ಸಿಬ್ಬಂದಿ!

ಸೋನಿಯಾ ಸೋಮವಾರ ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದಳು. ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ ಆಕೆಯ ಗೆಳತಿ ಎಷ್ಟೇ ಬಾಗಿಲು ಬಡಿದರೂ ಸೋನಿಯಾ ಬಾಗಿಲು ತೆರೆದಿರಲಿಲ್ಲ. ಮಲಗಿರಬಹುದೆಂದು ಸ್ವಲ್ಪ ಹೊತ್ತು ಅಲ್ಲೇ ಇದ್ದು, ಮತ್ತೆ ಬಾಗಿಲು ಬಡಿದಾಗಲೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಗೆಳತಿ ವಾರ್ಡನ್‌ಗೆ ಮಾಹಿತಿ ನೀಡಿದ್ದಾಳೆ. 

ಕೂಡಲೇ ಹಾಸ್ಟೆಲ್ ಸಿಬಂದಿ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here