Home Uncategorized ಮಂಗಳೂರು: ರಂಗಸ್ಥಳದಲ್ಲೇ ಕುಸಿದು ಬಿದ್ದು ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ನಿಧನ

ಮಂಗಳೂರು: ರಂಗಸ್ಥಳದಲ್ಲೇ ಕುಸಿದು ಬಿದ್ದು ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ನಿಧನ

10
0
Advertisement
bengaluru

ರಂಗಸ್ಥಳದಲ್ಲೇ ಹೃದಯಾಘಾತವಾಗಿ ಯಕ್ಷಗಾನ ಕಲಾವಿದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಕಲಾವಿದ. ಮಂಗಳೂರು: ರಂಗಸ್ಥಳದಲ್ಲೇ ಹೃದಯಾಘಾತವಾಗಿ ಯಕ್ಷಗಾನ ಕಲಾವಿದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಕಲಾವಿದ.

ಕಟೀಲಿನ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಗುರುವಪ್ಪ ಅವರು ಶಿಶುಪಾಲನ ಪಾತ್ರದಾರಿಯಾಗಿ ಬಣ್ಣ ಹಚ್ಚಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ಆ ಸಂದರ್ಭದಲ್ಲಿ ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ರಂಗಸ್ಥಳದಿಂದ ಕೆಳಗೆ ಕುಸಿದುಬಿದ್ದರು.

ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಅಷ್ಟಮಂಗಲ ಪ್ರಸಂಗವನ್ನೂ ಬರೆದಿದ್ದ ಅವರು ಕಳೆದ ಮಳೆಗಾಲದಲ್ಲಿ ಮಂಗಳೂರು ಪುರಭವನದಲ್ಲಿ ಯಕ್ಷಗಾನವನ್ನು ಆಡಿಸಿದ್ದರು.

ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಅವರು 2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು. ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದ ಅವರಿಗೆ ಅನೇಕ  ಸನ್ಮಾನಗಳು  ಸಂದಿವೆ.

bengaluru bengaluru

bengaluru

LEAVE A REPLY

Please enter your comment!
Please enter your name here