Home Uncategorized ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಶುಲ್ಕ ಪಾವತಿಸಬೇಕು!

ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಶುಲ್ಕ ಪಾವತಿಸಬೇಕು!

7
0
bengaluru

ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು (ಯುಡಿಎಫ್) ಪಾವತಿಸಬೇಕಾಗುತ್ತದೆ. ಮಂಗಳೂರು: ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು (ಯುಡಿಎಫ್) ಪಾವತಿಸಬೇಕಾಗುತ್ತದೆ.

ಸದ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುಡಿಎಫ್‌ ಅನ್ನು ನಿರ್ಗಮನ ಪ್ರಯಾಣಿಕರು ಮಾತ್ರ ಪಾವತಿಸುತ್ತಿದ್ದಾರೆ. ಆದರೆ, ಫೆಬ್ರವರಿಯಿಂದ ಆಗಮನ ಪ್ರಯಾಣಿಕರು ಕೂಡ ಈ ಶುಲ್ಕ ಪಾವತಿಸಬೇಕಿದೆ.

ಮೊದಲ ಬಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಅಭಿವೃದ್ಧಿ ಶುಲ್ಕವನ್ನು ವಿಧಿಸಲು ಮತ್ತು ನಿರ್ಗಮಿಸುವ ಪ್ರಯಾಣಿಕರ ಮೇಲೆ ಅಭಿವೃದ್ಧಿ ಶುಲ್ಕವನ್ನು ಹೆಚ್ಚಳ ಮಾಡಲು ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಮಂಗಳೂರು ವಿಮಾನ ನಿಲ್ದಾಣಕ್ಕೆ ಅನುಮತಿ ನೀಡಿದೆ.

ಎಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು. ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂತರಾಷ್ಟ್ರೀಯ ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ ಈ ಶುಲ್ಕ ಎಪ್ರಿಲ್‌ನಿಂದ 1,105 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಎಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು, ಮುಂದಿನ ವರ್ಷ ಮಾರ್ಚ್‌ ಬಳಿ ಕ 240 ಪಾವತಿಸಬೇಕಾಗಿದೆ.

bengaluru

ಕಳೆದ 12 ವರ್ಷದಿಂದ ಬಳಕೆದಾರರ ಶುಲ್ಕವನ್ನು ಏರಿಕೆ ಮಾಡಿರಲಿಲ್ಲ. ಈಗ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮೇಲ್ದರ್ಜೆಗೇರಿಸುವುದು, ರನ್‌ವೇ ವಿಸ್ತರಣೆ ಸಹಿತ ವಿವಿಧ ಅಭಿವೃದ್ಧಿ ನಡೆಸುವ ಕಾರಣದಿಂದ ಶುಲ್ಕ ಏರಿಕೆಗೆ ನಿರ್ಧರಿಸಲಾಗಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.

ಈ ಮಧ್ಯೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಈಗಿರುವ ದರವು ಫೆಬ್ರವರಿ ಹಾಗೂ ಮಾರ್ಚ್‌ಗೆ ಮಾತ್ರ ಅನ್ವಯವಾಗುವಂತೆ 80 ರೂ. ಇಳಿಕೆಯಾಗಲಿದ್ದು, ಎಪ್ರಿಲ್‌ನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

bengaluru

LEAVE A REPLY

Please enter your comment!
Please enter your name here