Home Uncategorized ಮಂಡ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ: ಚಕ್ರ ಹರಿದು ರೈತ ಸಾವು, ಬಾಲಕನ ಸ್ಥಿತಿ...

ಮಂಡ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ: ಚಕ್ರ ಹರಿದು ರೈತ ಸಾವು, ಬಾಲಕನ ಸ್ಥಿತಿ ಗಂಭೀರ

24
0

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ಪ್ರೇಕ್ಷಕನ ಮೇಲೆ ಗಾಡಿ ಚಕ್ರ ಹರಿದು ಓರ್ವ ರೈತ ಸಾವನ್ನಪ್ಪಿ, ಮತ್ತೋರ್ವ ಬಾಲಕನಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಬಳಿ ನಡೆದಿದೆ. ಮಂಡ್ಯ: ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ಪ್ರೇಕ್ಷಕನ ಮೇಲೆ ಗಾಡಿ ಚಕ್ರ ಹರಿದು ಓರ್ವ ರೈತ ಸಾವನ್ನಪ್ಪಿ, ಮತ್ತೋರ್ವ ಬಾಲಕನಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಬಳಿ ನಡೆದಿದೆ.

ಓಟದ ಸ್ಪರ್ಧೆ ವೇಳೆ ಪ್ರೇಕ್ಷಕನ ಮೇಲೆ ಗಾಡಿ ಚಕ್ರ ಹರಿದು ಓರ್ವ ರೈತ ಸಾವನ್ನಪ್ಪಿ, ಮತ್ತೋರ್ವ ಬಾಲಕನಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಬಳಿ ನಡೆದಿದೆ.

ತಾಲೂಕಿನ ಕೀಲಾರ ಗ್ರಾಮದ ನಾಗರಾಜು (42) ಎತ್ತಿನ ಗಾಡಿ ಚಕ್ರ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ ರೈತ. ಹುಲಿವಾನ ಗ್ರಾಮದ ಋತ್ವಿಕ್ (10) ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಹಳ್ವಿಕೇಶ್ವರ ಬೋರೇಶ್ವರ ಹಾಗೂ ರೈತ ಮಿತ್ರ ಬಳಗದ ವತಿಯಿಂದ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಬಳಿ 8ನೇ ವರ್ಷದ ಅಂತಾರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಓಟದ ಸ್ಪರ್ಧೆಯನ್ನು ಕೀಲಾರ ಗ್ರಾಮದ ಮಧು, ಚಿಕ್ಕಮಂಡ್ಯ ಗ್ರಾಮದ ನರಸಿಂಹ, ಆನಂದ, ರಾಜಪ್ಪ ಅವರು ಏರ್ಪಡಿಸಿದ್ದರು.

ಒಂದು ಕಡೆಯಿಂದ ಪ್ರಾರಂಭವಾದ ಓಟದ ಸ್ಪರ್ಧೆ ಮತ್ತೊಂದು ತುದಿ ತಲುಪಿತ್ತು. ಮತ್ತೊಂದು ತುದಿಯಲ್ಲಿ ಸಾರ್ವಜನಿಕರು ನಿಂತು ನೋಡುತ್ತಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಎತ್ತಿನ ಗಾಡಿ ಜನರ ಮೇಲೆಯೇ ಬಂದಿತು. ಈ ವೇಳೆ ನಾಗರಾಜುಗೆ ಗಾಡಿಯ ಮುಂಬದಿ ಡಿಕ್ಕಿ ಹೊಡೆ ಪರಿಣಾಮ ಕೆಳಗೆ ಬಿದ್ದ ಆತನ ಮೇಲೆ ಚಕ್ರ ಹರಿದು ತೀವ್ರವಾಗಿ ಗಾಯಗೊಂಡಿದ್ದಾರೆ. ಕೆಳಗೆ ಬಿದ್ದ ಋುತ್ವಿಕ್ ಕಾಲ್ತುಳಿತಕ್ಕೊಳಗಾಗಿ ಗಾಯಗೊಂಡಿದ್ದಾನೆ. ಕೂಡಲೇ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾರೂ ಚಿಕಿತ್ಸೆ ಫಲಕಾರಿಯಾಗದೆ ನಾಗರಾಜು ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಋತ್ವಿಕ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ನಾಗರಾಜು ರೈತ ಸಂಘದ ಸಕ್ರಿಯ ಕಾರ್ಯಕರ್ತನಾಗಿ ಆರ್ಗ್ಯಾನಿಕ್ ಮಂಡ್ಯ ಸಂಸ್ಥೆಯ ಫೀಲ್ಡ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಈ ನಡುವೆ ಎತ್ತಿನ ಗಾಡಿ ಓಟದ ಸ್ಪರ್ಧೆ ಆಯೋಜಿಸಿದ್ದ ಮಧು ಹಾಗೂ ಇತರರು ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ತಿಳಿದುಬಂದಿದೆ.

ಕಂದಾಯ ನಿರೀಕ್ಷಕರು ಜಾನುವಾರುಗಳಿಗೆ ಗಂಟು ರೋಗ ಇರುವುದರಿಂದ ಸ್ಪರ್ಧೆಯನ್ನು ಮುಂದೂಡುವಂತೆ ನೋಟಿಸ್ ನೀಡಿದ್ದರೂ, ಅದನ್ನು ಸ್ವೀಕರಿಸದೆ ಉದ್ಧಟತನ ತೋರಿದ್ದಾರೆಂದು ಹೇಳಲಾಗುತ್ತಿದೆ.

ಇದರಿಂದ ಅಸಮಾಧಾನಗೊಂಡಿರುವ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ತಿಳಿಸಿ ವಾಪಸ್ಸಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಸ್ಪರ್ಧಿಗಳಿಂದ ತಲಾ 4 ಸಾವಿರ ರೂ.ಗಳಂತೆ ಪ್ರವೇಶ ಶುಲ್ಕ ವಸೂಲಿ ಮಾಡಲಾಗಿತ್ತು. ಗೆದ್ದವರಿಗೆ ಬುಲೆಟ್​, ಪಲ್ಸರ್​, ಹೋಂಡಾ ಶೈನ್​ ಸೇರಿ ಆರು ದ್ವಿಚಕ್ರ ವಾಹನಗಳ ಬಹುಮಾನ ಪ್ರಕಟಿಸಲಾಗಿತ್ತು.

LEAVE A REPLY

Please enter your comment!
Please enter your name here