Home Uncategorized ಮಂಡ್ಯ: ಪ್ರಧಾನಿ ರೋಡ್ ಶೋ ಮಾರ್ಗದಲ್ಲಿ ಅಳವಡಿಸಲಾಗಿದ್ದ  ಉರಿಗೌಡ- ದೊಡ್ಡ ನಂಜೇಗೌಡ ಮಹಾದ್ವಾರದ ಹೆಸರು ರಾತ್ರೋರಾತ್ರಿ...

ಮಂಡ್ಯ: ಪ್ರಧಾನಿ ರೋಡ್ ಶೋ ಮಾರ್ಗದಲ್ಲಿ ಅಳವಡಿಸಲಾಗಿದ್ದ  ಉರಿಗೌಡ- ದೊಡ್ಡ ನಂಜೇಗೌಡ ಮಹಾದ್ವಾರದ ಹೆಸರು ರಾತ್ರೋರಾತ್ರಿ ತೆರವು! 

22
0

ಪ್ರಧಾನಿ ನರೇಂದ್ರ ಮೋದಿ ಮಾ.12 ರಂದು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿದರು. ಇದಕ್ಕೂ ಮುನ್ನ ಪ್ರಧಾನಿ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ಜನತೆ ಕಿಕ್ಕಿರಿದು ಸೇರಿದ್ದರು. ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಮಾ.12 ರಂದು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದರು. ಇದಕ್ಕೂ ಮುನ್ನ ಪ್ರಧಾನಿ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ಜನತೆ ಕಿಕ್ಕಿರಿದು ಸೇರಿದ್ದರು. ಪ್ರಧಾನಿ ಮೋದಿ ರೋಡ್ ಶೋಗೆ ಅಲ್ಲಲ್ಲಿ ಅಳವಡಿಸಲಾಗಿದ್ದ ಮಹಾದ್ವಾರಗಳ ವಿಷಯ ಈಗ ಸುದ್ದಿಯಲ್ಲಿದೆ. 

ರೋಡ್‌ ಶೋ ಮಾರ್ಗದಲ್ಲಿ ಮಹಾದ್ವಾರಕ್ಕೆ ಇಟ್ಟಿದ್ದ ‘ಉರಿಗೌಡ ಮತ್ತು ದೊಡ್ಡ ನಂಜೇಗೌಡ’ ಹೆಸರನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದ್ದು, ಅದಕ್ಕೆ ಬಾಲಗಂಗಾಧರ ನಾಥ ಸ್ವಾಮೀಜಿ ಮಹಾದ್ವಾರ ಎಂದು ಹೆಸರಿಡಲಾಗಿತ್ತು.

ಪ್ರಧಾನಿ ಮೋದಿ ರೋಡ್ ಶೋ ನಡೆಸಿದ ಮಾರ್ಗದಲ್ಲಿ ಒಟ್ಟು 4 ಮಹಾದ್ವಾರ ಅಳವಡಿಸಲಾಗಿತ್ತು. ರೋಡ್‌ ಶೋ ಆರಂಭವಾಗುವ ಪ್ರವಾಸಿ ಮಂದಿರದ ಬಳಿ ಸರ್‌. ಎಂ.ವಿಶ್ವೇಶ್ವರಯ್ಯ ಮಹಾದ್ವಾರ, ಜೆಸಿ ವೃತ್ತದಲ್ಲಿ ಕೆಂಪೇಗೌಡ, ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮಹಾದ್ವಾರ, ಫ್ಯಾಕ್ಟರಿ ಸರ್ಕಲ್‌ನಲ್ಲಿ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ಹಾಕಲಾಗಿತ್ತು.

ಉರಿಗೌಡ ಮತ್ತು ದೊಡ್ಡನಂಜೇಗೌಡ ಕಾಲ್ಪನಿಕ ವ್ಯಕ್ತಿಗಳಾಗಿದ್ದು, ನಿಜ ವ್ಯಕ್ತಿಗಳಂತೆ ಬಣ್ಣಿಸಲಾಗುತ್ತಿದೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಮುಖಂಡರು ಟಿಪ್ಪುವನ್ನು ಕೊಂದ ದೋಷವನ್ನು ಒಕ್ಕಲಿಗ ಸಮುದಾಯದ ತಲೆಗೆ ಕಟ್ಟಲು ಮುಂದಾಗಿದ್ದಾರೆ ಎಂದು ಹಲವರು ಉರಿಗೌಡ, ದೊಡ್ಡನಂಜೇಗೌಡ ಹೆಸರಿನ ಮಹಾದ್ವಾರಕ್ಕೆ ವಿರೊಧ ವ್ಯಕ್ತಪಡಿಸಿದ್ದರು. ಈಗ ಮಹಾದ್ವಾರದ ಹೆಸರು ಬದಲಾವಣೆ ಮಾಡಿರುವುದಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. 

LEAVE A REPLY

Please enter your comment!
Please enter your name here