Home Uncategorized ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ ತಂಡದವರು ಇಲ್ಲಿಗೆ ಬರುವಷ್ಟು ಘಟನೆ ಮುಖ್ಯವಾಗಿದೆಯೇ?: ಖುಷ್ಬೂ ಭೇಟಿಗೆ ಗೃಹ...

ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ ತಂಡದವರು ಇಲ್ಲಿಗೆ ಬರುವಷ್ಟು ಘಟನೆ ಮುಖ್ಯವಾಗಿದೆಯೇ?: ಖುಷ್ಬೂ ಭೇಟಿಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ

9
0
Advertisement
bengaluru

ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊವನ್ನು ಶೌಚಾಲಯದಲ್ಲಿ ಸಹಪಾಠಿಗಳು ಚಿತ್ರೀಕರಿಸಿದ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ. ಬೆಂಗಳೂರು: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊವನ್ನು ಶೌಚಾಲಯದಲ್ಲಿ ಸಹಪಾಠಿಗಳು ಚಿತ್ರೀಕರಿಸಿದ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ.

ಘಟನೆ ನಡೆದಿರುವ ನೇತ್ರ ಜ್ಯೋತಿ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಸದಸ್ಯೆ ಖುಷ್ಬೂ ಸುಂದರಂ ಇಂದು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಈ ಬಗ್ಗೆ ಸುದ್ದಿಗಾರರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರ ಪ್ರತಿಕ್ರಿಯೆ ಕೇಳಿದಾಗ, ರಾಷ್ಟ್ರೀಯ ಮಹಿಳಾ ಆಯೋಗದವರು ಮಣಿಪುರಕ್ಕೆ ಹೋಗಿಲ್ಲ; ಇಲ್ಲಿಗೆ ಬಂದಿದ್ದಾರೆ ಎಂದು ಇದೇ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಗುಡುಗಿದರು.

ಮಹಿಳಾ ಆಯೋಗದವರು ಬರಲಿ, ಬೇಡ ಅನ್ನಲು ನಾನಾರು, ಆದರೆ ಇದಕ್ಕೆ ಇಷ್ಟೊಂದು ಪ್ರಾಮುಖ್ಯತೆ ನೀಡುವವರು ಮಣಿಪುರದಲ್ಲಿ ಪರಿಸ್ಥಿತಿ ಏನಾಗಿದೆ, ಅಲ್ಲಿ ಮಹಿಳೆಯರ ಮೇಲೆ ಯಾವ ರೀತಿ ದೌರ್ಜನ್ಯ ನಡೆದಿದೆ ಎಂದು ಗೊತ್ತಿದ್ದರೂ ಇದುವರೆಗೆ ಹೋಗಿ ವಿಚಾರಿಸಿಲ್ಲ ಎಂದು ಆರೋಪಿಸಿದ್ದಾರೆ. 

ಇದನ್ನೂ ಓದಿ: ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣ ಮಕ್ಕಳಾಟವೆಂಬ ಅರ್ಥದಲ್ಲಿ ಹೇಳಿಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

bengaluru bengaluru

ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ ಮಕ್ಕಳ ಆಟ ಅಂತಾ ಹೇಳಿಲ್ಲ. ಸ್ನೇಹಿತರ ಮಧ್ಯೆ ಘಟನೆಗಳು ನಡೆಯುತ್ತೆ, ಅದು ಅಲ್ಲಿಗೆ ಮುಗಿಯುತ್ತೆ. ಪ್ರಕರಣದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಹೆಚ್ಚಿನ ಕ್ರಮ ತೆಗೆದುಕೊಳ್ಳುತ್ತಾರೆ. ಈಗಾಗಲೇ ಸಸ್ಪೆಂಡ್ ಮಾಡಿದ್ದಾರೆ, ಹೆಚ್ಚಿನ ಕ್ರಮ ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶಿಸಲ್ಲ, ಅವರೇ ದೂರು ದಾಖಲಿಸುತ್ತಾರೆ. ಈಗಾಗಲೇ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಸತ್ಯತೆ ಎಲ್ಲವೂ ಹೊರಬರಲಿದೆ ಎಂದಿದ್ದಾರೆ.

Kushbu Sundar at the place of inquiry in Udupi in connection with alleged voyeurism case @XpressBengaluru @vinndz_TNIE pic.twitter.com/N8SZMwC8PG
— Prakash (@prakash_TNIE) July 27, 2023


bengaluru

LEAVE A REPLY

Please enter your comment!
Please enter your name here