Home Uncategorized ಮತದಾರರಿಗೆ ರೂ.6 ಸಾವಿರ ಆಮಿಷ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಮತದಾರರಿಗೆ ರೂ.6 ಸಾವಿರ ಆಮಿಷ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

9
0
bengaluru

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಹಣ ಹಂಚಲು ಸಂಚು ನಡೆಸಿರುವ ರಾಜ್ಯ ಬಿಜೆಪಿ ಮತ್ತು ಕೇಂದ್ರ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಸೋಮವಾರ ಒತ್ತಾಯಿಸಿದೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಹಣ ಹಂಚಲು ಸಂಚು ನಡೆಸಿರುವ ರಾಜ್ಯ ಬಿಜೆಪಿ ಮತ್ತು ಕೇಂದ್ರ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಸೋಮವಾರ ಒತ್ತಾಯಿಸಿದೆ.

ಈ ಸಂಬಂಧ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ (CEO) ಮೂಲಕ ರಾಜ್ಯ ಕಾಂಗ್ರೆಸ್ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರನ್ನು ಒಳಗೊಂಡ ನಿಯೋಗ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಸೋಮವಾರ ಭೇಟಿ ನೀಡಿ ದೂರು ಸಲ್ಲಿಸಿದೆ.

‘ರಾಜ್ಯದ ಐದು ಕೋಟಿ ಮತದಾರರನ್ನು ರೂ.30 ಸಾವಿರ ಕೋಟಿಗೆ ಖರೀದಿಸಲು ಬಿಜೆಪಿ ಸಂಚು ರೂಪಿಸಿದೆ. ಈ ಸಂಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರೇರಣೆ ನೀಡಿದ್ದಾರೆ. ಹೀಗಾಗಿ, ಈ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು’ ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

bengaluru
bengaluru

LEAVE A REPLY

Please enter your comment!
Please enter your name here