Home Uncategorized ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಇಂದು ಆರಂಭ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಇಂದು ಆರಂಭ

10
0
Advertisement
bengaluru

ಮತದಾರರ ಪಟ್ಟಿ ಪರಿಷ್ಕರಣೆ(special revision of voters list) ಕಾರ್ಯ ಇಂದು ಶುಕ್ರವಾರ ಆರಂಭವಾಗಿದ್ದು ಆಗಸ್ಟ್ 21ರವರೆಗೆ ಸಾಗಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಹೆಸರು ತಿದ್ದುಪಡಿ, ಸೇರ್ಪಡೆ ಮತ್ತು ಅಳಿಸುವಿಕೆಗೆ ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ(special revision of voters list) ಕಾರ್ಯ ಇಂದು ಶುಕ್ರವಾರ ಆರಂಭವಾಗಿದ್ದು ಆಗಸ್ಟ್ 21ರವರೆಗೆ ಸಾಗಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಹೆಸರು ತಿದ್ದುಪಡಿ, ಸೇರ್ಪಡೆ ಮತ್ತು ಅಳಿಸುವಿಕೆಗೆ ಮನೆ ಮನೆಗೆ ಭೇಟಿ ನೀಡಲಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನ ಮೇರೆಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಏಜೆಂಟರನ್ನು ನಿಯೋಜಿಸಬೇಕು ಎಂದು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಹೆಸರು ಸೇರ್ಪಡೆ, ಅಳಿಸುವಿಕೆ ಮತ್ತು ತಿದ್ದುಪಡಿಯನ್ನು ದೋಷಗಳಿಲ್ಲದೆ ಕೈಗೊಳ್ಳುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು. 

ಒಂದು ತಿಂಗಳ ಕಾಲ, ಮತಗಟ್ಟೆ ಮಟ್ಟದ ಅಧಿಕಾರಿಗಳು BLO (ಬೂತ್ ಮಟ್ಟದ ಅಧಿಕಾರಿ) ಸಾಫ್ಟ್‌ವೇರ್ ಮೂಲಕ ಮತದಾರರ ಹೆಸರನ್ನು ಸೇರಿಸುವುದು, ತಿದ್ದುಪಡಿ ಮಾಡುವುದು ಮತ್ತು ತೆಗೆದುಹಾಕುವ ಅಂಕಿಅಂಶಗಳನ್ನು ಪರಿಷ್ಕರಿಸಲು ಮನೆಗಳಿಗೆ ಭೇಟಿ ನೀಡುತ್ತಾರೆ. ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರನ್ನು ನಿಯೋಜಿಸಬೇಕು ಎಂದು ಆಯುಕ್ತರು ತಿಳಿಸಿದರು.

bengaluru bengaluru

ಬೆಂಗಳೂರಿನ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಅಧಿಕಾರಿಗಳ ಕೊರತೆ ಇರುವ ಕಡೆ ಹೆಚ್ಚಿನ ಬೂತ್ ಮಟ್ಟದ ಅಧಿಕಾರಿಗಳನ್ನು ನಿಯೋಜಿಸುವಂತೆ ಸೂಚಿಸಲಾಗಿದೆ. 

ಮೃತ ಮತದಾರರು ಹಾಗೂ ಸ್ಥಳಾಂತರಗೊಂಡವರ ಮಾಹಿತಿಯನ್ನು ಸರಿಯಾಗಿ ನಮೂದಿಸಬೇಕು. ಹೊಸ ನೋಂದಣಿ (ನಮೂನೆ 6) ಮತ್ತು ತಿದ್ದುಪಡಿಗೆ (ನಮೂನೆ 8) ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು. 


bengaluru

LEAVE A REPLY

Please enter your comment!
Please enter your name here