Home Uncategorized ಮತ್ತೆ 15 ದಿನ ಸಂಚಾರಿ ದಂಡ ಪಾವತಿಗೆ ಶೇ.50 ವಿನಾಯಿತಿ ನೀಡಿದ ಸರ್ಕಾರ, ಆದರೆ ಷರತ್ತು...

ಮತ್ತೆ 15 ದಿನ ಸಂಚಾರಿ ದಂಡ ಪಾವತಿಗೆ ಶೇ.50 ವಿನಾಯಿತಿ ನೀಡಿದ ಸರ್ಕಾರ, ಆದರೆ ಷರತ್ತು ಅನ್ವಯ!!

20
0

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.

ಹೌದು.. ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ಶೇ 50ರ ರಿಯಾಯಿತಿ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಅಂಥದ್ದೇ ಅವಕಾಶ ನೀಡಿದೆ. ಶೇ 50ರಷ್ಟು ದಂಡ ಪಾವತಿಗೆ ಮಾರ್ಚ್​ 4ರಿಂದ 15 ದಿನಗಳ ಕಾಲಾವಕಾಶ ನೀಡಿದೆ. 

ಇದನ್ನೂ ಓದಿ: ಟ್ರಾಫಿಕ್ ದಂಡ ಪಾವತಿಗೆ ರಿಯಾಯಿತಿ ನೀಡುವುದು ನಿಯಮ ಉಲ್ಲಂಘಿಸುವವರನ್ನು ಪ್ರೋತ್ಸಾಹಿಸುತ್ತದೆ: ತಜ್ಞರ ಅಭಿಪ್ರಾಯ

ಷರತ್ತು ಅನ್ವಯ
11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್​ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 2023ರ ಫೆಬ್ರುವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಈ ರಿಯಾಯಿತಿಯು ಶನಿವಾರದಿಂದ(ಮಾರ್ಚ್‌ 4) 15 ದಿನಗಳವರೆಗೆ ಇತ್ಯರ್ಥಪಡಿಸಿಕೊಂಡು ದಂಡ ಪಾವತಿಸುವ ಪ್ರಕರಣಗಳಿಗೆ ಮಾತ್ರ ದೊರಕಲಿದೆ. ಕಾನೂನು ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಹಮತಿ ಪಡೆದು ಈ ಆದೇಶ ಹೊರಡಿಸಲಾಗುತ್ತಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ಶೇ.50 ರಿಯಾಯಿತಿ: 50 ಕೋಟಿ ರೂ. ದಾಟಿದ ಟ್ರಾಫಿಕ್ ದಂಡ ಸಂಗ್ರಹ

ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಕೆಲವಲು ದಂಡಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು.

#TrafficFine #ಕರ್ನಾಟಕ ರಾಜ್ಯ ಸರ್ಕಾರದ ಆದೇಶ ದಿನಾಂಕ:-03.03.2023 ರನ್ವಯ #ದಿನಾಂಕ:04.03.2023 ರಿಂದ ಅನ್ವಯವಾಗುವಂತೆ 15 ದಿನಗಳ ವರೆಗೆ, #ಸಂಚಾರಿ ಇ-ಚಲನ್ ಮೂಲಕ ವಿಧಿಸಿರುವ ದಂಡದ ಮೊತ್ತದಲ್ಲಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಶೇ 50% ರಿಯಾಯಿತಿಯನ್ನು ನೀಡಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. pic.twitter.com/J7ZjFTGHBP
— Arjun Surya (@ArjunSu60867470) March 3, 2023

ಟ್ರಾಫಿಕ್ ಫೈನ್​ ಎಲ್ಲೆಲ್ಲಿ ಪಾವತಿಸಬಹುದು?
ಕರ್ನಾಟಕ ವನ್​​ ವೆಬ್​ಸೈಟ್​​ನಲ್ಲಿ ವಿವರಗಳನ್ನು ಪಡೆದು ದಂಡ ಪಾವತಿಸಬಹುದಾಗಿದೆ. ಪೇಟಿಎಂ ಆ್ಯಪ್​ ಮೂಲಕವೂ ನಿಯಮ ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಹತ್ತಿರ ಸಂಚಾರ ಪೊಲೀಸ್​ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ದಂಡ ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ.

LEAVE A REPLY

Please enter your comment!
Please enter your name here