Home Uncategorized ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆಗೆ ಪ್ರಲ್ಹಾದ ಜೋಶಿ ತೀವ್ರ ಖಂಡನೆ -ಖರ್ಗೆಯಂತಹ ಹಿರಿಯ ನಾಯಕರಿಂದ ಇಂತಹ...

ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆಗೆ ಪ್ರಲ್ಹಾದ ಜೋಶಿ ತೀವ್ರ ಖಂಡನೆ -ಖರ್ಗೆಯಂತಹ ಹಿರಿಯ ನಾಯಕರಿಂದ ಇಂತಹ ಭಾಷೆ ನಿರೀಕ್ಷಿಸಿರಲಿಲ್ಲ

10
0
Advertisement
bengaluru

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು (Mallikarjun Kharge) ಇತ್ತೀಚಿಗೆ ರಾಜಸ್ಥಾನದಲ್ಲಿ ಭಾಷಣದ ವೇಳೆ ಬಿಜೆಪಿ ಬಗ್ಗೆ ವಿವಾದಾತ್ಮಕ ಹೇಳಿಕೆ (indecent language) ನೀಡಿದ್ದನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಖಂಡತುಂಡವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, “ನಮಗೆಲ್ಲ ಗೊತ್ತು, ಇಂದಿನ ಕಾಂಗ್ರೆಸ್ ‘ಮೂಲ’ ಕಾಂಗ್ರೆಸ್ ಅಲ್ಲ. ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಬಾಲಗಂಗಾಧರ ತಿಲಕ್ ಮತ್ತು ಡಾ ಬಿ ಆರ್ ಅಂಬೇಡ್ಕರ್ ಅವರಂತಹ ನಾಯಕರೊಂದಿಗೆ ಈ ಪಕ್ಷವು ಹೇಗೆ ವರ್ತಿಸಿತು ಎಂಬುದು ಇಡೀ ದೇಶಕ್ಕೆ ತಿಳಿದಿದೆ.

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ದಿಗ್ಗಜರು ಕೇವಲ ತಮ್ಮ ಪಕ್ಷಕ್ಕೆ ಸೇರಿದವರು ಎಂಬ ಕಾಂಗ್ರೆಸ್ ಪಕ್ಷದ ನಂಬಿಕೆ ಸರಿಯಲ್ಲ. ಅವರು ರಾಷ್ಟ್ರಕ್ಕೆ ಸೇರಿದವರು ಮತ್ತು ಪ್ರತಿಯೊಬ್ಬರೂ ಅವರನ್ನು ತಮ್ಮ ನಾಯಕರೆಂದು ಹೇಳಿಕೊಳ್ಳುವ ಸಮಾನ ಹಕ್ಕನ್ನು ಹೊಂದಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ಹಿರಿಯ ನಾಯಕರು, ನಾವು ಅವರಿಂದ ಇಂತಹ ಭಾಷೆಯನ್ನು ನಿರೀಕ್ಷಿಸಿರಲಿಲ್ಲ ಎಂದಿರುವ ಪ್ರಲ್ಹಾದ ಜೋಶಿಯವರು ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

I strongly condemn the indecent language used by the Congress president and opposition leader. We did not expect such use of language from a senior and experienced leader like @kharge Ji. pic.twitter.com/hs3Hu4wnDS

— Pralhad Joshi (@JoshiPralhad) December 20, 2022

bengaluru bengaluru

ಸೋಮವಾರ ರಾಜಸ್ಥಾನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, “ಕಾಂಗ್ರೆಸ್ ದೇಶಕ್ಕಾಗಿ ನಿಂತಿದೆ ಮತ್ತು ಕಾಂಗ್ರೆಸ್ ನಾಯಕರು ದೇಶಕ್ಕಾಗಿ ಸರ್ವೋಚ್ಚ ತ್ಯಾಗ ಮಾಡಿ ದೇಶ ಸ್ವಾತಂತ್ರ್ಯ ಗಳಿಸಲು ಕಾರಣರಾಗಿದ್ದಾರೆ‌. ಆದರೆ ದೇಶಕ್ಕಾಗಿ ಬಿಜೆಪಿಯು ಒಂದು ನಾಯಿಯನ್ನೂ ಕಳೆದುಕೊಂಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆಯವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಖರ್ಗೆಯವರ ಈ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತೀವ್ರವಾಗಿ ಖಂಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ


bengaluru

LEAVE A REPLY

Please enter your comment!
Please enter your name here