Home Uncategorized ಮಹದಾಯಿ ಜಲ ವಿವಾದ: ಕೇಂದ್ರ ಸಚಿವ ಅಮಿತ್ ಶಾ ಜೊತೆ ಗೋವಾ ಸಿಎಂ ನಿಯೋಗ ಮಾತುಕತೆ

ಮಹದಾಯಿ ಜಲ ವಿವಾದ: ಕೇಂದ್ರ ಸಚಿವ ಅಮಿತ್ ಶಾ ಜೊತೆ ಗೋವಾ ಸಿಎಂ ನಿಯೋಗ ಮಾತುಕತೆ

15
0
Advertisement
bengaluru

ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನಡುವಣ ಮಾತುಕತೆಯಲ್ಲಿ ಯಾವುದೇ ಫಲಪ್ರದ ಚರ್ಚೆಗಳು ನಡೆದಿಲ್ಲ ಎಂದು ತಿಳಿದುಬಂದಿದೆ.  ಬೆಳಗಾವಿ: ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನಡುವಣ ಮಾತುಕತೆಯಲ್ಲಿ ಯಾವುದೇ ಫಲಪ್ರದ ಚರ್ಚೆಗಳು ನಡೆದಿಲ್ಲ ಎಂದು ತಿಳಿದುಬಂದಿದೆ. 

ಕರ್ನಾಟಕಕ್ಕೆ ಮಹದಾಯಿ ನೀರು ಒದಗಿಸುವ ಕಳಸಾ-ಬಂಡೂರಿ ಯೋಜನೆಯನ್ನು ಸ್ಥಗಿತಗೊಳಿಸಬೇಕೆಂದು ಕೇಂದ್ರ ಗೃಹ ಸಚಿವರನ್ನು ಒತ್ತಾಯಿಸಲು ಗೋವಾ ನಿಯೋಗ ಹೋಗಿತ್ತು. ಕಳಸಾ ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿ(DPR)ಗೆ ನೀಡಿರುವ ಅನುಮತಿಯನ್ನು ಹಿಂತೆಗೆದುಕೊಳ್ಳುವುದಾಗಿ ನಿಯೋಗಕ್ಕೆ ಗೃಹ ಸಚಿವ ಅಮಿತ್ ಶಾ ಮತ್ತು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಯಾವುದೇ ಭರವಸೆಯನ್ನು ನೀಡಿಲ್ಲ ಎಂದು ತಿಳಿದುಬಂದಿದೆ.

ಗೋವಾ ಸಿಎಂ ಅವರ ಪ್ರತಿನಿಧಿಗಳ ಜೊತೆ ನನ್ನನ್ನು ಭೇಟಿಯಾಗಲು ಬಂದರು. ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಪಟ್ಟಂತೆ ನಾವು ಸಾಕಷ್ಟು ಚರ್ಚೆ ನಡೆಸಿದೆವು. ಖಂಡಿತವಾಗಿಯೂ ಈ ಸಮಸ್ಯೆಯನ್ನು ಸದ್ಯದಲ್ಲಿಯೇ ಬಗೆಹರಿಸುತ್ತೇವೆ ಎಂದು ಶೇಖಾವತ್ ಟ್ವೀಟ್ ಮಾಡಿದ್ದಾರೆ.

ಗೋವಾ ನಿಯೋಗ ಗೃಹ ಸಚಿವ ಅಮಿತ್ ಶಾ ಅವರಿಗೆ ಮಹದಾಯಿ ಜಲ ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಒತ್ತಾಯಿಸಿತು. ಅಲ್ಲದೆ ಕರ್ನಾಟಕದ ಡಿಪಿಆರ್ ಗೆ ನೀಡಿರುವ ಅನುಮತಿಯನ್ನು ಹಿಂತೆಗೆದುಕೊಳ್ಳುವಂತೆ ಸಹ ಒತ್ತಾಯಿಸಿತು. ಆದರೆ ನಿಯೋಗಕ್ಕೆ ಕರ್ನಾಟಕಕ್ಕೆ ವಿರುದ್ಧವಾಗಿ ಕಳಸಾ-ಬಂಡೂರಿ ಯೋಜನೆ ಸ್ಥಗಿತ ಮಾಡುವ ಯಾವುದೇ ಭರವಸೆ ನೀಡಿಲ್ಲ. ಸಮಸ್ಯೆಯನ್ನು ಗಮನಿಸುತ್ತೇವೆ ಎಂದಷ್ಟೇ ಅಮಿತ್ ಶಾ ಹೇಳಿದ್ದಾರೆ.

bengaluru bengaluru

ಇದನ್ನೂ ಓದಿ: ಮಹದಾಯಿ ಯೋಜನೆಗೆ ಮತ್ತೆ ಕೊಕ್ಕೆ: ಜನರ ಬದುಕು ಹದಗೆಡಿಸುವ ನಿಮಗೆ ಎಷ್ಟು ಉಗಿದರೂ ಕಮ್ಮಿ, ಬಿಜೆಪಿ ವಿರುದ್ಧ ಜೆಡಿಎಸ್ ಕಿಡಿ

ಈ ಮಧ್ಯೆ, ಗೋವಾದಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷಗಳು ಮಹದಾಯಿ ವಿವಾದದಲ್ಲಿ ಕಚ್ಚಾಡುತ್ತಿವೆ. ಕರ್ನಾಟಕದ ಡಿಪಿಆರ್ ಗೆ ನೀಡಿರುವ ಅನುಮತಿಯನ್ನು ಹಿಂತೆಗೆದುಕೊಳ್ಳಬೇಕೆಂದು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಗೋವಾ ಸಿಎಂ ಡಿಸೆಂಬರ್ 30ರಂದು ಘೋಷಿಸಿದ್ದರು. ಪತ್ರಕ್ಕೆ ಏನಾಗಿದೆ. ನಿಯೋಗ ಏಕೆ ಪ್ರಧಾನಿಯವರನ್ನು ಭೇಟಿ ಮಾಡುವ ಬದಲು ಅಮಿತ್ ಶಾ ಅವರನ್ನು ಭೇಟಿ ಮಾಡಿದೆ ಎಂದು ಗೋವಾ ಕಾಂಗ್ರೆಸ್ ಮುಖ್ಯಸ್ಥ ಅಮಿತ್ ಪಾಟ್ಕರ್ ತಿಳಿಸಿದ್ದಾರೆ.

ಬಿಜೆಪಿಯ ಕೇಂದ್ರ ನಾಯಕರು ಹೊರಡಿಸುವ ಫತ್ವಾ ಪ್ರಕಾರ ಸ್ಥಳೀಯ ಬಿಜೆಪಿ ನಾಯಕರು ಕೆಲಸ ಮಾಡುತ್ತಾರೆ. ಪ್ರಧಾನ ಮಂತ್ರಿಗಳು ನಿಯೋಗವನ್ನು ಭೇಟಿ ಮಾಡಲು ನಿರಾಕರಿಸಿರುವುದರಿಂದ ಗೋವಾ ಸಿಎಂ ಅಮಿತ್ ಶಾ ಅವರನ್ನು ಭೇಟಿ ಮಾಡುವ ನಾಟಕವಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಯುರಿ ಅಲೆಮಾವ್ ಟ್ವೀಟ್ ಮಾಡಿದ್ದಾರೆ.

ಗೋವಾ ವಿಧಾನಸಭೆ ಅಧಿವೇಶನ ಇದೇ 16ರಂದು ಆರಂಭವಾಗುತ್ತಿದೆ. ಮಹದಾಯಿ ಜಲ ವಿವಾದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಕಾದಾಟ, ಗದ್ದಲಕ್ಕೆ ಕಾರಣವಾಗಲಿದೆ. ಗೋವಾ ಅಸೆಂಬ್ಲಿ ಸ್ಪೀಕರ್ ರಮೇಶ್ ತಾವಡ್ಕರ್, ಅಧಿವೇಶನದಲ್ಲಿ ಮಹದಾಯಿ ವಿವಾದ ಬಗ್ಗೆ ವಿಶೇಷವಾಗಿ ಚರ್ಚಿಸಲು ಅವಕಾಶ ಮಾಡಿಕೊಡುವುದಾಗಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಮಹದಾಯಿ ವಿವಾದದಲ್ಲಿ ಕೇಂದ್ರದ ನಿಲುವೇನು ಎಂದು ತಿಳಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here