Home Uncategorized ಮಹದಾಯಿ ನಿರ್ಹವಣೆಗೆ 'ಪ್ರವಾಹ್ ಪ್ರಾಧಿಕಾರ' ರಚನೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಮಹದಾಯಿ ನಿರ್ಹವಣೆಗೆ 'ಪ್ರವಾಹ್ ಪ್ರಾಧಿಕಾರ' ರಚನೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ

12
0
bengaluru

ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸಲು ‘ಮಹದಾಯಿಯಿ ಪ್ರವಾಹ್ ಪ್ರಾಧಿಕಾರ’ (ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ)’ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒ‌ಪ್ಪಿಗೆ ನೀಡಿದೆ. ಬೆಂಗಳೂರು: ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸಲು ‘ಮಹದಾಯಿಯಿ ಪ್ರವಾಹ್ ಪ್ರಾಧಿಕಾರ’ (ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ)’ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒ‌ಪ್ಪಿಗೆ ನೀಡಿದೆ.

ಈ ಪ್ರಾಧಿಕಾರವು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮಾದರಿಯಲ್ಲೇ ಮಹದಾಯಿ ನ್ಯಾಯಮಂಡಳಿಯ ತೀರ್ಪಿನ ಅನುಸಾರ ರಚನೆಯಾಗಿದೆ. ಈ ಪ್ರಾಧಿಕಾರದ ಮುಖ್ಯ ಉದ್ದೇಶವೆಂದರೆ ಪ್ರಾಧಿಕಾರದ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸುವುದಾಗಿದೆ.

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಾತನಾಡಿ, ಮಹದಾಯಿ ಪ್ರವಾಹ್ ಪ್ರಾಧಿಕಾರ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. “ಇದು ಮಹದಾಯಿ ಜಲ ವಿವಾದ ನ್ಯಾಯಮಂಡಳಿಯ ತೀರ್ಪು ಮತ್ತು ನಿರ್ಧಾರಗಳ ಅನುಸರಣೆ, ಅನುಷ್ಠಾನಕ್ಕೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ನಡುವೆ ಪರಸ್ಪರ ನಂಬಿಕೆ ಮತ್ತು ವಿಶ್ವಾಸದ ನಿರ್ಮಾಣಕ್ಕೆ ಇದು ನೆರವಾಗಲಿದೆ. ಈ ಮೂಲಕ ಈ ಪ್ರದೇಶಗಳ ಒಟ್ಟಾರೆ ಅಭಿವೃದ್ಧಿಗೆ ಜಲ ಸಂಪನ್ಮೂಲಗಳ ಸಮರ್ಪಕ ಬಳಕೆಯನ್ನು ಖಾತರಿಪಡಿಸುತ್ತದೆ ಎಂದು ತಿಳಿಸಿದ್ದಾರೆ.

bengaluru

ಮಹದಾಯಿ ಜಲ ವಿವಾದ ಸಂಬಂಧ ಪ್ರಾಧಿಕಾರ ರಚನೆ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದ್ದಾರೆ.

“ಮಹದಾಯಿ ನ್ಯಾಯಮಂಡಳಿ ತೀರ್ಪು ಅನುಷ್ಠಾನದ ದಿಶೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹದಾಯಿ ಪ್ರವಾಹ್ (ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಪರ ನದಿ ಪ್ರಾಧಿಕಾರ) ರಚನೆಗೆ ನಿರ್ಧಾರ ತೆಗೆದುಕೊಳ್ಳುವ ಮೂಲಕ ಮುಂದಿನ ಪ್ರಮುಖ ಹೆಜ್ಜೆ ಇಟ್ಟಿದೆ. ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಇದು ಕರ್ನಾಟಕದ ಯೋಜನೆಗಳ ಅನುಷ್ಠಾನಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

bengaluru

LEAVE A REPLY

Please enter your comment!
Please enter your name here