Home Uncategorized ಮಹಾರಾಷ್ಟ್ರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ 12 ಗಂಟೆಗಳ ಕಾಲ ನಿರಂತರ ಸಾಮೂಹಿಕ ಅತ್ಯಾಚಾರ: 8 ಆರೋಪಿಗಳ...

ಮಹಾರಾಷ್ಟ್ರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ 12 ಗಂಟೆಗಳ ಕಾಲ ನಿರಂತರ ಸಾಮೂಹಿಕ ಅತ್ಯಾಚಾರ: 8 ಆರೋಪಿಗಳ ಬಂಧನ

1
0
bengaluru

ಮಹಾರಾಷ್ಟ್ರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ 12 ಗಂಟೆಗಳ ಕಾಲ 8 ಮಂದಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.ಮಹಾರಾಷ್ಟ್ರದ ಪಾಲ್ಘಡ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಅಪ್ರಾಪ್ತ ಬಾಲಕಿಯನ್ನು ಸಮುದ್ರ ತೀರಕ್ಕೆ ಕರೆದೊಯ್ಯುವ ಮೊದಲು ಬಂಗಲೆಯಲ್ಲಿ ಸತತ 12 ಗಂಟೆಗಳ ಕಾಲ ಅತ್ಯಾಚಾರವೆಸಗಿದ್ದರು.

ಆರೋಪಿಗಳು ಬಾಲಕಿಯನ್ನು ಮಾಹಿಮ್ ಗ್ರಾಮದ ಮನೆಯೊಂದಕ್ಕೆ ಕರೆದಿಯ್ದಿದ್ದರು, ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಆರೋಪಿಗಳ ವಿರುದ್ಧ ಸತ್ಪತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಬಂಗಲೆಯಲ್ಲಿ ಮೊದಲು ಅತ್ಯಾಚಾರ ನಡೆಸಿ ಬಳಿಕ ಸಮುದ್ರ ತೀರಕ್ಕೆ ಕರೆದೊಯ್ದು ಮತ್ತೆ ಅತ್ಯಾಚಾರ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

bengaluru

ಈ ಪ್ರಕರಣದಲ್ಲಿ ಆರೋಪಿಗಳನ್ನು ಭಾನುವಾರ ಬಂಧಿಸಲಾಗಿದೆ. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376(ಡಿ), 366(ಎ), 341, 342, 323 ಮತ್ತು ಪೋಕ್ಸೋ ಕಾಯ್ದೆಯಡಿ ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

bengaluru

LEAVE A REPLY

Please enter your comment!
Please enter your name here