ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಆತನ ಸಂಬಂಧಿಕರೇ ಹತ್ಯೆ ಮಾಡಿರುವ ಘಟನೆಯೊಂದು ಮಾಗರಿ ರಸ್ತೆಯ ಗೋಪಾಲಪುರದಲ್ಲಿ ಬುಧವಾರ ನಡೆದಿದೆ. ಬೆಂಗಳೂರು: ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಆತನ ಸಂಬಂಧಿಕರೇ ಹತ್ಯೆ ಮಾಡಿರುವ ಘಟನೆಯೊಂದು ಮಾಗರಿ ರಸ್ತೆಯ ಗೋಪಾಲಪುರದಲ್ಲಿ ಬುಧವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಗೋಪಾಲಪುರದ 3ನೇ ಕ್ರಾಸ್ ನಿವಾಸಿ ಸೋನು ಪಾಷಾ (37) ಎಂದು ಗುರ್ತಿಸಲಾಗಿದೆ. ಈತ ರಾಮಚಂದ್ರಾಪುರದಲ್ಲಿ ನೆಲೆಸಿರುವ ತನ್ನ ಸಂಬಂಧಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ.
ಇದರಿಂದ ಸಿಟ್ಟಿಗೆದ್ದ ಆಕೆಯ ಕುಟುಂಬಸ್ಥರು ಪಾಷಾ ಮನೆಬಳಿ ಹೋಗಿ ವಾಗ್ವಾದಕ್ಕಿಳಿದಿದ್ದಾರೆ. ಈ ವೇಳೆ ಪಾಷಾ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡಸಿದ್ದಾರೆ.
ದಾಳಿಯಿಂದಾಗಿ ಪಾಷಾ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲಕ್ಕುರುಳಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.
ಈ ಸಂಬಂಧ ಮಾಗಡಿ ರಸ್ತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.