Home Uncategorized ಮಹಿಳೆಗೆ ವಂಚನೆ: ಬೆಳಗಾವಿ ಪಿಎಸ್ಐ ವಿರುದ್ಧ ಪ್ರಕರಣ ದಾಖಲು

ಮಹಿಳೆಗೆ ವಂಚನೆ: ಬೆಳಗಾವಿ ಪಿಎಸ್ಐ ವಿರುದ್ಧ ಪ್ರಕರಣ ದಾಖಲು

13
0
bengaluru

ಮಹಿಳೆಯೊಬ್ಬರಿಗೆ ವಂಚಿಸಿದ ಆರೋಪದ ಕೇಳಿಬಂದ ಹಿನ್ನೆಲೆಯಲ್ಲಿ ಬೆಳಗಾವಿ ಮೂಲದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಳಗಾವಿ: ಮಹಿಳೆಯೊಬ್ಬರಿಗೆ ವಂಚಿಸಿದ ಆರೋಪದ ಕೇಳಿಬಂದ ಹಿನ್ನೆಲೆಯಲ್ಲಿ ಬೆಳಗಾವಿ ಮೂಲದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸ್ನೇಹ ಬೆಳೆಸಿದ್ದ ಪಿಎಸ್ಐ ಲಾಲಸಾಬ್ ನದಾಫ್, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ್ದ. ಆದರೆ, ನಂತರ ಮತ್ತೊಬ್ಬ ಹುಡುಗಿಯೊಂದಿಗೆ ಮದುವೆಯಾಗಲು ಸಿದ್ಧತೆ ನಡೆಸಿದ್ದ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಆರೋಪಿ ಪಿಎಸ್ಐ ಲಾಲಸಾಬ್ ನದಾಫ್ ಪೊಲೀಸ್ ಇಲಾಖೆಯ ವೈರ್ ಲೆಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ.

ಹಲವು ಬಾರಿ ಮನವಿ ಸಲ್ಲಿಸಿದ್ದರೂ ಬೆಳಗಾವಿಯ ಉಪ ಪೊಲೀಸ್ ಆಯುಕ್ತರು (ಡಿಸಿಪಿ ಎಲ್ & ಒ) ಉದ್ದೇಶಪೂರ್ವಕವಾಗಿ ಪ್ರಕರಣವನ್ನು ನಿರ್ಲಕ್ಷಿಸಿದ್ದಾರೆ. ಕ್ರಮಕ್ಕೆ ಮುಂದಾಗಿಲ್ಲ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

bengaluru
bengaluru

LEAVE A REPLY

Please enter your comment!
Please enter your name here