Home Uncategorized ಮಹಿಳೆಯರಿಗೆ ಉಚಿತ ಬಸ್‌ ಸೇವೆ ಒದಗಿಸಿ: ಸಿಎಂ ಬೊಮ್ಮಾಯಿಗೆ ಆಗ್ರಹ

ಮಹಿಳೆಯರಿಗೆ ಉಚಿತ ಬಸ್‌ ಸೇವೆ ಒದಗಿಸಿ: ಸಿಎಂ ಬೊಮ್ಮಾಯಿಗೆ ಆಗ್ರಹ

7
0
bengaluru

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸಬೇಕೆಂಬ ಆಗ್ರಹಗಳು ಹೆಚ್ಚಾಗುತ್ತಿವೆ. ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸಬೇಕೆಂಬ ಆಗ್ರಹಗಳು ಹೆಚ್ಚಾಗುತ್ತಿವೆ.

ಪಂಜಾಬ್, ದೆಹಲಿ ಮತ್ತು ತಮಿಳುನಾಡಿನಂತಹ ರಾಜ್ಯಗಳು ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆಯನ್ನು ಒದಗಿಸುತ್ತಿದ್ದು, ರಾಜ್ಯ ಸರ್ಕಾರ ಕೂಡ ಇಂತಹ ಸೇವೆಯನ್ನು ನೀಡಬೇಕೆಂಬ ಆಗ್ರಹಗಳು ಕೇಳಿ ಬರುತ್ತಿವೆ.

ಸರ್ಕಾರ ಇಂತಹ ಕ್ರಮಗಳನ್ನು ಕೈಗೊಂಡಿದ್ದೇ ಆದರೆ, ಸಾಮಾಜಿಕ ಬದಲಾವಣೆಗಳು ಕಂಡು ಬರಲಿದೆ. ಇದು ಮಹಿಳೆಯರಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡುವ ಸಾಮಾಜಿಕ ಬದಲಾವಣೆ ತರುವ ಹೆಜ್ಜಾಗಿದೆ ಎಂದು ಸಾರಿಗೆ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಬಸ್ ಪ್ರಯಾಣಿಕ ವೇದಿಕೆಯ ಸದಸ್ಯೆ ಶಹೀನಾ ಶಾಸ ಅವರು ಮಾತನಾಡಿ, ಬೆಂಗಳೂರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆಯನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಪಂಜಾಬ್, ದೆಹಲಿಯಲ್ಲಿ ಇಂತಹ ಸೇವೆಗಳನ್ನು ನೀಡುತ್ತಿದೆ. ತಮಿಳುನಾಡು ಇತ್ತೀಚೆಗಷ್ಟೇ ಈ ಸೇವೆಯನ್ನು ಒದಗಿಸುತ್ತಿದೆ. ಇತ್ತೀಚೆಗಷ್ಟೇ ರಾಜ್ಯ ಯೋಜನಾ ಆಯೋಗದ ಸಮೀಕ್ಷೆಯೊಂದು ಮಹಿಳೆಯರು ಪ್ರತಿ ತಿಂಗಳು ರೂ.800-1000 ಉಳಿಸಲು ಸಮರ್ಥರಾಗಿದ್ದಾರೆಂದು ಹೇಳಿದೆ ಎಂದು ಹೇಳಿದ್ದಾರೆ.

bengaluru

ದೇಶದ ಇತರೆ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಬಸ್ ಟಿಕೆಟ್ ಗಳ ದರ ಹೆಚ್ಚಾಗಿದೆ. ಇದು ಲಕ್ಷಾಂತರ ಮಹಿಳೆಯರ ಮೇಲೆ ಪರಿಣಾಮ ಬೀರುತ್ತಿದೆ. ಉಚಿತ ಬಸ್ ಸೇವೆ ಒದಗಿಸಿದ್ದೇ ಆದರೆ, ಇತರರ ಮೇಲೆ ಮಹಿಳೆಯರು ಅವಲಂಬಿಸುವುದು ಕಡಿಮೆಯಾಗುತ್ತದೆ. ಈ ಕ್ರಮವು ಮಹಿಳೆಯರಿಗೆ ಸ್ವಾತಂತ್ರ್ಯ ಹಾಗೂ ಅವಕಾಶಗಳು ಶಕ್ತಗೊಳಿಸುತ್ತದೆ ಎಂದು ತಿಳಿಸಿದ್ದಾರೆ.

ಬಿಎಂಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆಯನ್ನು ನೀಡುವುದು ಸಾಮಾಜಿಕ ಬದಲಾವಣೆಯೇ ಹೊರತು ಬೇರೇನೂ ಅಲ್ಲ. ಮಹಿಳೆಯರು ತಾವು ಬಯಸಿದ್ದನ್ನು ಅನುಸರಿಸುವ ಸ್ವಾತಂತ್ರ್ಯವನ್ನು ಪಡೆಯುತ್ತಾರೆ. ಕಾಲೇಜಿಗೆ ಹೋಗಬಹುದು ಮತ್ತು ಉದ್ಯೋಗಿಗಳಿಗೆ ಸೇರಬಹುದು ಎಂದು ಚಲನಶೀಲತೆ ತಜ್ಞ ಶ್ರೇಯಾ ಗಡೇಪಲ್ಲಿ ಅವರು ಹೇಳಿದ್ದಾರೆ.

ಬಸ್ ನಿಗಮಕ್ಕೆ ಆರ್ಥಿಕ ಹೊರೆಯಾಗದಂತೆ ಇಂತಹ ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಬಿಎಂಟಿಸಿಗೆ ಬೆಂಬಲ ನೀಡಬೇಕು. ಇಲ್ಲವಾದಲ್ಲಿ ಗುಣಮಟ್ಟದ ಸೇವೆ ನೀಡಲು ಸಾರಿಗೆ ಸಂಸ್ಥೆ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

“ದೈನಂದಿನ ಕೂಲಿಯಾಗಿ ಕೆಲಸ ಮಾಡುವ ಅನೇಕ ಮಹಿಳೆಯರು ಪ್ರತಿದಿನ ಸುಮಾರು 200-300 ರೂಪಾಯಿಗಳನ್ನು ಗಳಿಸುತ್ತಾರೆ. ತಮ್ಮ ಆದಾಯದ ಐದನೇ ಒಂದು ಭಾಗಕ್ಕಿಂತ ಹೆಚ್ಚು ಹಣವನ್ನು ಬಸ್ ಪ್ರಯಾಣಕ್ಕಾಗಿ ಖರ್ಚು ಮಾಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡಿದರೆ, ಅವರು ಉತ್ತಮ ಆಹಾರ ಮತ್ತು ಶಿಕ್ಷಣವನ್ನು ಒದಗಿಸಲು ಹಣವನ್ನು ಹೂಡಿಕೆ ಮಾಡಬಹುದು ಎಂದಿದ್ದಾರೆ.

ಬಿಎಂಟಿಸಿಯ ಉನ್ನತ ಅಧಿಕಾರಿಯೊಬ್ಬರು ಮಾತನಾಡಿ, ಬಸ್ ನಿಗಮವು ಈಗಾಗಲೇ ಆರ್ಥಿಕ ಹೊರೆಯನ್ನು ಅನುಭವಿಸುತ್ತಿದೆ. ರಾಜ್ಯ ಸರ್ಕಾರವು ಉಚಿತ ಸೇವೆಯ ವೆಚ್ಚವನ್ನು ಭರಿಸಿದ್ದೇ ಆದರೆ, ನಮಗೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ.

bengaluru

LEAVE A REPLY

Please enter your comment!
Please enter your name here