Home Uncategorized ಮಾಜಿ ಸಚಿವ, ಶಾಸಕ ಮುನಿರತ್ನಗೆ ಸಂಕಷ್ಟ: ಅಕ್ರಮ ಗಣಿಗಾರಿಕೆ ಆರೋಪದಡಿ ಎಫ್ಐಆರ್ ದಾಖಲು

ಮಾಜಿ ಸಚಿವ, ಶಾಸಕ ಮುನಿರತ್ನಗೆ ಸಂಕಷ್ಟ: ಅಕ್ರಮ ಗಣಿಗಾರಿಕೆ ಆರೋಪದಡಿ ಎಫ್ಐಆರ್ ದಾಖಲು

5
0
Advertisement
bengaluru

ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದೆ. ಭೂಮಿ ದಾಖಲೆ ಸಂಬಂಧ ಎಫ್ಐಆರ್ ದಾಖಲಾಗಿದ್ದು ಮುನಿರತ್ನ ಅವರನ್ನು A4 ಆರೋಪಿ ಎಂದು ಗುರುತಿಸಲಾಗಿದೆ. ಬೆಂಗಳೂರು: ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದೆ. ಭೂಮಿ ದಾಖಲೆ ಸಂಬಂಧ ಎಫ್ಐಆರ್ ದಾಖಲಾಗಿದ್ದು ಮುನಿರತ್ನ ಅವರನ್ನು A4 ಆರೋಪಿ ಎಂದು ಗುರುತಿಸಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ ಮುನಿರತ್ನ(Muniratna) ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್  ದಾಖಲಾಗಿದೆ. ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲು ಮಾಡಿದ್ದರು. 

ದೂರಿನ ಮೇರೆಗೆ ಇದೀಗ ಎಫ್​ಐಆರ್​ ದಾಖಲಾಗಿದೆ. ಜೊತೆಗೆ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜಿಲೆಟಿನ್​ ಸ್ಫೋಟ ಮಾಡಿದ ಆರೋಪ ಕೇಳಿಬಂದಿತ್ತು.

bengaluru bengaluru

ಹುಣಸಮಾರನಹಳ್ಳಿ ಗ್ರಾಮಸ್ಥರಿಂದ ಧರಣಿ: ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಧರಣಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ್ದ ತಹಶೀಲ್ದಾರ್ ಅವರು ದೂರು ದಾಖಲು ಮಾಡಿದ್ದರು. ಹುಣಸಮಾರನಹಳ್ಳಿ ಸರ್ವೆ ನಂಬರ್ 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಮಾಡಲಾಗಿದ್ದು, ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮ, ಶಾಸಕ ಮುನಿರತ್ನ ವಿರುದ್ಧ ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.


bengaluru

LEAVE A REPLY

Please enter your comment!
Please enter your name here