Home Uncategorized ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ಪತ್ನಿ ವಿಯೋಗ

ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ಪತ್ನಿ ವಿಯೋಗ

28
0
Advertisement
bengaluru

ಹಿರಿಯ ಕಾಂಗ್ರೆಸ್ ನಾಯಕ, ಶ್ರೀನಿವಾಸಪುರ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್  ಅವರ ಪತ್ನಿ ವಿಜಯಮ್ಮ(69) ಅವರು ಶುಕ್ರವಾರ ವಿಧಿವಶರಾಗಿದ್ದಾರೆ.  ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಶ್ರೀನಿವಾಸಪುರ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್  ಅವರ ಪತ್ನಿ ವಿಜಯಮ್ಮ(69) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. 

ಕಳೆದ 2 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರು ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಇದನ್ನು ಓದಿ: ಆಕ್ರೋಶದಲ್ಲಿ ಮಾತನಾಡಿದ್ದೇನೆ, ಅಪಮಾನ ಮಾಡುವ ಉದ್ದೇಶ ಇರಲಿಲ್ಲ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕ್ಷಮೆಯಾಚಿಸಿದ ಹೆಚ್’ಡಿಕೆ

ವಿಜಯಮ್ಮ ಅವರು ಪತಿ, ಒರ್ವ ಪುತ್ರಿ, ಒರ್ವ ಪುತ್ರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

bengaluru bengaluru

ವಿಜಯಮ್ಮ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸಹ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕರು ಹಾಗೂ ಮಾಜಿ ವಿಧಾನಸಭಾಧ್ಯಕ್ಷರಾದ ರಮೇಶ್ ಕುಮಾರ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮನವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ರಮೇಶ್ ಕುಮಾರ್ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನಿಡಲಿಯೆಂದು ಪ್ರಾರ್ಥಿಸುತ್ತೇನೆ‌ ಎಂದಿದ್ದಾರೆ.


bengaluru

LEAVE A REPLY

Please enter your comment!
Please enter your name here