Home Uncategorized ಮಾರ್ಚ್ 21ರಿಂದ ಆರ್‌ಟಿಸಿ ಕಾರ್ಮಿಕ ಸಂಘಟನೆಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

ಮಾರ್ಚ್ 21ರಿಂದ ಆರ್‌ಟಿಸಿ ಕಾರ್ಮಿಕ ಸಂಘಟನೆಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

15
0
Advertisement
bengaluru

ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (JAC) ಸಾರಿಗೆ ಸಚಿವ ಶ್ರೀರಾಮುಲು ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇದೇ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಬೆಂಗಳೂರು: ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (JAC) ಸಾರಿಗೆ ಸಚಿವ ಶ್ರೀರಾಮುಲು ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇದೇ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ಇದು ರಾಜ್ಯಾದ್ಯಂತ ಬಸ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ನಿನ್ನೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಎಚ್‌ವಿ ಅನಂತ ಸುಬ್ಬರಾವ್,  “ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಮತ್ತು ಕೆಕೆಎಸ್‌ಆರ್‌ಟಿಸಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. 2016ರಿಂದ ಅವರ ವೇತನ ಪರಿಷ್ಕರಣೆಯಾಗಿಲ್ಲ.ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರವನ್ನು ಒತ್ತಾಯಿಸಿದ್ದೇವೆ. ಆದರೆ ಅವುಗಳನ್ನು ಈಡೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ.

ಮೂಲ ವೇತನದಲ್ಲಿ ಶೇಕಡಾ 25 ರಷ್ಟು ಹೆಚ್ಚಳ, ಉತ್ತಮ ಕೆಲಸದ ಸ್ಥಿತಿ, ವೈದ್ಯಕೀಯ ಸೌಲಭ್ಯಗಳು, ಕಾರ್ಮಿಕರ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ಹಿಂಪಡೆಯುವುದು ಹೀಗೆ 8 ಬೇಡಿಕೆಗಳನ್ನು ಒಕ್ಕೂಟವು ಹೊಂದಿವೆ ಎಂದು ಹೇಳಿದರು. ಸಚಿವರು ನೀಡಿದ ಶೇಕಡಾ 10 ಹೆಚ್ಚಳವನ್ನು ಸಂಘಗಳು ತಿರಸ್ಕರಿಸಿವೆ. 

ಶಾಲಾ ಕಾಲೇಜು ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ಸಂದರ್ಭದಲ್ಲೇ ಮುಷ್ಕರಕ್ಕೆ ಕರೆ ನೀಡಿರುವುದು ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ.

bengaluru bengaluru

bengaluru

LEAVE A REPLY

Please enter your comment!
Please enter your name here