Home Uncategorized ಮಾರ್ಚ್ 31 ರೊಳಗೆ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೆಲಸ ಸ್ಥಗಿತಗೊಳಿಸುತ್ತೇವೆ: ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ

ಮಾರ್ಚ್ 31 ರೊಳಗೆ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೆಲಸ ಸ್ಥಗಿತಗೊಳಿಸುತ್ತೇವೆ: ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ

3
0
bengaluru

ಕರ್ನಾಟಕ ಗುತ್ತಿಗೆದಾರರ ಸಂಘ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘದ ಸದಸ್ಯರು ಕರ್ನಾಟಕ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಡಿ ಕೆಂಪಣ್ಣ ಮತ್ತು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ನೇತೃತ್ವದಲ್ಲಿ ಬುಧವಾರ… ಬೆಂಗಳೂರು: ಕರ್ನಾಟಕ ಗುತ್ತಿಗೆದಾರರ ಸಂಘ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘದ ಸದಸ್ಯರು ಕರ್ನಾಟಕ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಡಿ ಕೆಂಪಣ್ಣ ಮತ್ತು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ನೇತೃತ್ವದಲ್ಲಿ ಬುಧವಾರ ನಗರದ ಫ್ರೀಡಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದು, ಮಾರ್ಚ್ 31 ರೊಳಗೆ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೆಲಸ ಸ್ಥಗಿತಗೊಳಿಸುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.

25,000 ಕೋಟಿ ಬಾಕಿ ಹಣ ಬಿಡುಗಡೆ, ಜಿಎಸ್‌ಟಿ ದರ ಇಳಿಕೆ, ಕಿರುಕುಳ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ, ಕಾಮಗಾರಿಗಳ ಸುಗಮ ಟೆಂಡರ್ ಪ್ರಕ್ರಿಯೆಗೆ ಗುತ್ತಿಗೆದಾರರು ಆಗ್ರಹಿಸಿದ್ದಾರೆ.

ತೋಟಗಾರಿಕಾ ಸಚಿವ ಮುನಿರತ್ನ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಂತರ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಮತ್ತು ಇತರ ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏಕತೆ ಹಾಗೂ ಶಕ್ತಿಯ ಸಾಂಕೇತಿಕವಾಗಿ ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು.

ಶಾಸಕರು ಹಾಗೂ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಈ ಸಂಬಂಧ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಬೇಕೆಂದು ಒತ್ತಾಯಿಸಿದ್ದರು. ಈ ಸಂಬಂಧ ಸಚಿವರು, ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳಿಗೆ ನೂರಾರು ಪತ್ರ ಬರೆದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಕೆಂಪಣ್ಣ ಅವರು ಮಾಡಿರುವ ಆರೋಪಗಳ ಸಂಬಂಧ ಎಲ್ಲಾ ದಾಖಲೆಗಳನ್ನು ಸಲ್ಲಿಸುತ್ತೇವೆಂದು ಹೇಳಿದ್ದಾರೆ.

bengaluru

ಬಹುತೇಕ ಕಾಮಗಾರಿಗಳು ಮುಖ್ಯವಾಗಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ), ನೀರಾವರಿ ಇಲಾಖೆ ಮತ್ತು ಬಿಬಿಎಂಪಿಗೆ ಸಂಬಂಧಿಸಿದ್ದಾಗಿದೆ ಎಂದು ಗುತ್ತಿಗೆದಾರರು ಹೇಳಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಅವರು ಮಾತನಾಡಿ, ಗುತ್ತಿಗೆದಾರರ ಬಾಕಿ ಹಣವನ್ನು ಜನವರಿ 31ರೊಳಗೆ ಪಾವತಿಸುವಂತೆ ಬಿಬಿಎಂಪಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಜ.31ರೊಳಗೆ ಹಣ ಬಿಡುಗಡೆ ಮಾಡದೇ ಹೋದಲ್ಲಿ ಕಾಮಗಾರಿ ಕೆಲಸಗಳ ಸ್ಥಗಿತಗೊಳಿಸುತ್ತೇವೆಂದು ಪುನರುಚ್ಛರಿಸಿದ್ದಾರೆ.

bengaluru

LEAVE A REPLY

Please enter your comment!
Please enter your name here