Home Uncategorized ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ- ಸಿಎಂ ಬೊಮ್ಮಾಯಿ

ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ- ಸಿಎಂ ಬೊಮ್ಮಾಯಿ

9
0
bengaluru

ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಲಬುರಗಿ: ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಬಾರಿ  ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದೆ. ಈ ಹಿಂದೆ ವರ್ಷಕ್ಕೆ ಹೆಚ್ಚೆಂದರೇ ಒಂದು ಸಾವಿರ ಕೊಠಡಿಗಳನ್ನು ನಿರ್ಮಿಸಲಾಗುತಿತ್ತು. ಆದರೆ ಬಿಜೆಪಿ ಸರ್ಕಾರ ಈ ಸಾಲಿನಲ್ಲಿ ಕಲ್ಯಾಣ ಕರ್ನಾಟಕದಲ್ಲಿ 1,100 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದರು. 

“ಈ ಬಾರಿ ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡಿದೆ. ಈ ಹಿಂದೆ ವರ್ಷಕ್ಕೆ ಹೆಚ್ಚೆಂದರೇ ಒಂದು ಸಾವಿರ ಕೊಠಡಿಗಳನ್ನು ಸರ್ಕಾರಗಳು ನಿರ್ಮಿಸುತ್ತಿದ್ದವು. ಆದರೇ ನಮ್ಮ ಸರ್ಕಾರ ಈ ಸಾಲಿನಲ್ಲಿ ಕಲ್ಯಾಣ ಕರ್ನಾಟಕದಲ್ಲಿ 1,100 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ.
1/2 pic.twitter.com/G6QWFJ3lOS
— CM of Karnataka (@CMofKarnataka) February 26, 2023

 2023-24ನೇ ಸಾಲಿಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರೂ. 5, 000 ಕೋಟಿ ಮೀಸಲಿರಿಸಿದ್ದು, ಪ್ರತಿ ಕ್ಷೇತ್ರದ ಅಭಿವೃದ್ಧಿಗೆ ಕನಿಷ್ಠ ರೂ. 50 ಕೋಟಿ ಅನುದಾನ ನೀಡಲಾಗುತ್ತಿದೆ. ರಾಜಧಾನಿ ಬೆಂಗಳೂರಿನ ಮಾದರಿಯಲ್ಲಿಯೇ, ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲಾ ಕೇಂದ್ರಗಳು ಅಭಿವೃದ್ಧಿಯಾಗಬೇಕು, ಕಲ್ಯಾಣ ಕರ್ನಾಟಕದ ಜನತೆಯ ಬದುಕು ಹಸನಾಗಬೇಕು ಎಂದು ಅವರು ಹೇಳಿದರು.

bengaluru

ಹೈದರಾಬಾದ್ ಕರ್ನಾಟಕಕ್ಕೆ ಬಿಎಸ್ ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಎಂದು ಹೆಸರಿಟ್ಟು ಈ ಭಾಗದ ಅಭಿವೃದ್ಧಿಗೆ ನಾಂದಿ ಹಾಡಿದರು.ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಆ ಅಭಿವೃದ್ಧಿ ಮಂಡಳಿ ಸ್ಥಾಪಿಸಿದರು. ಈ ವರ್ಷ ರೂ 3, 000 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ಪಡೆದು, ಹಿಂದೆಂದೂ ಕಾಣದ ರೀತಿಯಲ್ಲಿ  ಈ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ಪ್ರಯತ್ನಿಸಿದೆ ಎಂದರು. 

bengaluru

LEAVE A REPLY

Please enter your comment!
Please enter your name here