ಕಲಬುರಗಿ:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಕಲಬುರಗಿ, ಯಾದಗಿರಿ ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ನದಿಯ ಅಚ್ಚುಕಟ್ಟು ಪ್ರದೇಶ ಹಾಗೂ ನದಿ ಪಾತ್ರದ ಪ್ರವಾಹ ಪೀಡಿತ ಗ್ರಾಮಗಳು ಹಾಗೂ ಮಳೆ ಬಾಧಿತ ಬೀದರ ಜಿಲ್ಲೆಯ ಕೆಲ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.
ವೈಮಾನಿಕ ಸಮೀಕ್ಷೆ ಮುಗಿಸಿದ ನಂತರ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲಬುರಗಿ, ಯಾದಗಿರಿ ಹಾಗೂ ಮಳೆ ಬಾಧಿತ ಬೀದರ ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹದ ಪರಿಸ್ಥಿತಿ ಹಾಗೂ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಪ್ರಕೃತಿ ವಿಕೋಪ ನಿರ್ವಹಣೆ ಸಂಬಂಧ ಆಯಾ ಜಿಲ್ಲಾಡಳಿತಗಳು ಕೈಗೊಂಡಿರುವ ಕಾರ್ಯಗಳಿಗೆ ತೃಪ್ತಿ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ @BSYBJP ರವರು ಇಂದು ಕಲಬುರ್ಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು.
— CM of Karnataka (@CMofKarnataka) October 21, 2020
ಗೃಹ ಸಚಿವ @BSBommai, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/tVkf5nz78W
ಸಭೆಯ ಚರ್ಚೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಲಬುರಗಿ ಜಿಲ್ಲೆಯಲ್ಲಿ ಮಳೆ ಹಾಗೂ ಪ್ರವಾಹದಿಂದ ಹೆಚ್ಚಿನ ಹಾನಿಯಾಗಿದ್ದು, ಎನ್.ಡಿ.ಅರ್.ಎಫ್. ನಿಯಮಾವಳಿಯಂತೆ ಪರಿಹಾರ ಕಾರ್ಯ ಕೈಗೊಳ್ಳಬೇಕು. ಮನೆಗೆ ನೀರು ನುಗ್ಗಿ ಬಟ್ಟೆ ಮತ್ತು ಪಾತ್ರೆ ಹಾನಿ ಪ್ರಕರಣಗಳಲ್ಲಿ ಸಂತ್ರಸ್ತರಿಗೆ 10 ಸಾವಿರ ರೂ. ಗಳನ್ನು ಒಂದು ವಾರದಲ್ಲಿ ವಿತರಿಸಬೇಕು ಎಂದು ಕಲಬುರಗಿ ಡಿ.ಸಿ. ಅವರಿಗೆ ಸೂಚಿಸಿದರು.