Home Uncategorized ಮುರುಘಾ ಮಠ ಶ್ರೀಗಳ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್'ನಿಂದ ನೋಟಿಸ್ ಜಾರಿ

ಮುರುಘಾ ಮಠ ಶ್ರೀಗಳ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್'ನಿಂದ ನೋಟಿಸ್ ಜಾರಿ

22
0

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಮುರುಘಾ ಶ್ರೀಗಳ ವಿರುದ್ಧ ಷಡ್ಯಂತ್ರ ರೂಪಿಸಿದ ಆರೋಪ ಸಂಬಂಧ ಪೊಲೀಸರು ಸಮರ್ಪಕ ತನಿಖೆ ನಡೆಸದೇ ಅಸಹಾಯಕರಾಗಿದ್ದಾರೆ. ಹೀಗಾಗಿ ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ತನಿಖೆ ವರ್ಗಾಯಿಸಲು ಕೋರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ತನಿಖೆ ವರ್ಗಾವಣೆ ಸಂಬಂಧ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿರುವ ಹೈಕೋರ್ಟ್, ಫೆಬ್ರವರಿ 6ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ನಿಖೆಯನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ವರ್ಗಾಯಿಸಿ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಯಿಂದ ತನಿಖೆ ನಡೆಸುವಂತೆ ಬಸವಪ್ರಭು ಸ್ವಾಮೀಜಿ ರಿಟ್ ಅರ್ಜಿಯಲ್ಲಿ ಕೋರಿದ್ದರು.

LEAVE A REPLY

Please enter your comment!
Please enter your name here