ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ. ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ (ಜ 10) 28 ವರ್ಷದ ತಾಯಿಯೊಬ್ಬರು ತನ್ನ ಎರಡೂವರೆ ವರ್ಷದ ಗಂಡು ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತಕ್ಕೆ ಬಲಿಯಾಗಿದ್ದರು.
ಇದನ್ನೂ ಓದಿ: ಮೆಟ್ರೋ ಪಿಲ್ಲರ್ ದುರಂತ: ಗುತ್ತಿಗೆದಾರರ ಲೈಸೆನ್ಸ್ ರದ್ದುಪಡಿಸುವವರೆಗೂ ಶವ ತೆಗೆದುಕೊಳ್ಳಲ್ಲ; ಮೃತ ತೇಜಸ್ವಿನಿ ತಂದೆ ಪಟ್ಟು!
ತನ್ನ ಗಂಡನೊಂದಿಗೆ ಮಗುವನ್ನು ಬೇಬಿ ಸಿಟಿಂಗ್ಗೆ ಬಿಟ್ಟು ಬರಲು ಈ ಮಹಿಳೆ ತೆರಳುತ್ತಿದ್ದಾಗ ದುರಂತ ಸಂಭವಿಸಿತ್ತು.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡುವ ಆರಗ ಜ್ಞಾನೇಂದ್ರ ಅವರು, ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ), ನಿರ್ದೇಶಕ ಚೈತನ್ಯ, ಮೇಲ್ವಿಚಾರಕ ಲಕ್ಷ್ಮೀಪತಿ, ಜೆಇ ಪ್ರಭಾಕರ್ ಸೇರಿದಂತೆ 8 ಮಂದಿ ಪ್ರಕರಣದ ಆರೋಪಿಗಳಿದ್ದಾರೆ. ಈಗಾಗಲೇ ಈ 8 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಖಂಡಿತವಾಗಿಯು. ಕ್ರಮ ಕೈಗೊಳ್ಳುತ್ತೇವೆ. ಇದು ಕಂಪನಿಯ ಸಂಪೂರ್ಣ ನಿರ್ಲಕ್ಷ್ಯವಾಗಿದೆ ಎಂದು ತಿಳಿಸಿದ್ದಾರೆ.