Home Uncategorized ಮೈಸೂರು: ವಸತಿ ಶಾಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು

ಮೈಸೂರು: ವಸತಿ ಶಾಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು

5
0
bengaluru

ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ವಿದ್ಯುತ್ ಸ್ಪರ್ಶವಾಗಿ ಏಳು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಮೈಸೂರು: ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ವಿದ್ಯುತ್ ಸ್ಪರ್ಶವಾಗಿ ಏಳು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಮೃತ ಬಾಲಕನನ್ನು ನವೀನ್ (7) ಎಂದು ಗುರ್ತಿಸಲಾಗಿದೆ. ಈತ ಶಾಲೆಯ ದೈಹಿಕ ಶಿಕ್ಷಕ ಬಸವಣ್ಣ ಅವರ ಪುತ್ರನಾಗಿದ್ದಾನೆಂದು ತಿಳಿದುಬಂದಿದೆ.

ಆಕಸ್ಮಿಕವಾಗಿ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲೆಯ ಡೈನಿಂಗ್ ಹಾಲ್ ನಲ್ಲಿ ಬಾಟಲಿಗೆ ನೀರು ತುಂಬಿಸುತ್ತಿದ್ದಾಗ ಈ ಘಟನೆ ನಡೆದಿದೆ. ತಕ್ಷಣ ಮಗುವನ್ನು ನಂಜನಗೂಡಿನ ಕೃಷ್ಣಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಗು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಗೋವಿಂದರಾಜು, ಪಿಎಸ್‌ಐ ಆರತಿ ಭೇಟಿ ನೀಡಿ ವಿವರ ಸಂಗ್ರಹಿಸಿದ್ದಾರೆ.

bengaluru
bengaluru

LEAVE A REPLY

Please enter your comment!
Please enter your name here