Home Uncategorized ಮೈಸೂರು: ಹನುಮ ಜಯಂತಿ ಮೆರವಣಿಗೆ ವೇಳೆ ಗುಂಪು ಘರ್ಷಣೆ; ಯುವಬ್ರಿಗೇಡ್​ನ ಕಾರ್ಯಕರ್ತನ ಬರ್ಬರ ಹತ್ಯೆ

ಮೈಸೂರು: ಹನುಮ ಜಯಂತಿ ಮೆರವಣಿಗೆ ವೇಳೆ ಗುಂಪು ಘರ್ಷಣೆ; ಯುವಬ್ರಿಗೇಡ್​ನ ಕಾರ್ಯಕರ್ತನ ಬರ್ಬರ ಹತ್ಯೆ

6
0
Advertisement
bengaluru

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಈ ಘಟನೆ  ಮೈಸೂರಿನ ತಿ.ನರಸೀಪುರ ಪಟ್ಟಣದ ಹೊರ ವಲಯದಲ್ಲಿ  ನಡೆದಿದೆ. ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ.  ಕ್ಷುಲ್ಲಕ ಕಾರಣಕ್ಕೆ  ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಇದನ್ನೂ ಓದಿ: ಬೆಂಗಳೂರು: ಸಹದ್ಯೋಗಿ ಪೊಲೀಸ್ ವಿರುದ್ಧವೇ ಅತ್ಯಾಚಾರ ದೂರು ನೀಡಿದ ಮಹಿಳಾ ಪೊಲೀಸ್ ಪೇದೆ

ಮೃತ ಯುವಕ  ವೇಣುಗೋಪಾಲ್ ಯುವಬ್ರಿಗೇಡ್​ನ ಕಾರ್ಯಕರ್ತನಾಗಿದ್ದು, ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿಯಾಗಿದ್ದಾನೆ, ನಿನ್ನೆ ನಡೆದ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು, ಈ ವೇಳೆ ಎರಡು ಗುಂಪುಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು.

bengaluru bengaluru

ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ದೈವಾರಾಧನೆ ನಿಂದಿಸಿದ ವ್ಯಕ್ತಿ ಬಂಧನ

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾದ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಗೆ ಯುವ ಬ್ರಿಗೇಡ್‌ ಮುಖಂಡ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದ್ದು, ಮೃತ ಯುವಕನ ಅಂತಿಮ ದರ್ಶನ ಪಡೆದಿದ್ದಾರೆ. ಮೃತ ಯುವಕನ ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.   


bengaluru

LEAVE A REPLY

Please enter your comment!
Please enter your name here