Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಯಶಸ್ವಿಯಾಗಿ ನಡೆದ ದಸರಾ ಮಹೋತ್ಸವ: ಲಕ್ಷಾಂತರ ಜನರಿಂದ ವೀಕ್ಷಣೆ, 10 ಕೋಟಿ ರೂ.ಖರ್ಚು; ಸಚಿವ ಸೋಮಶೇಖರ್
  • ಕರ್ನಾಟಕ
  • ನಗರ
  • ಮೈಸೂರು

ಯಶಸ್ವಿಯಾಗಿ ನಡೆದ ದಸರಾ ಮಹೋತ್ಸವ: ಲಕ್ಷಾಂತರ ಜನರಿಂದ ವೀಕ್ಷಣೆ, 10 ಕೋಟಿ ರೂ.ಖರ್ಚು; ಸಚಿವ ಸೋಮಶೇಖರ್

The Bengaluru Live October 27, 2020 12:00 PM 1 minute read
ಯಶಸ್ವಿಯಾಗಿ ನಡೆದ ದಸರಾ ಮಹೋತ್ಸವ: ಲಕ್ಷಾಂತರ ಜನರಿಂದ ವೀಕ್ಷಣೆ, 10 ಕೋಟಿ ರೂ.ಖರ್ಚು; ಸಚಿವ ಸೋಮಶೇಖರ್

ಯಶಸ್ವಿಯಾಗಿ ನಡೆದ ದಸರಾ ಮಹೋತ್ಸವ: ಲಕ್ಷಾಂತರ ಜನರಿಂದ ವೀಕ್ಷಣೆ, 10 ಕೋಟಿ ರೂ.ಖರ್ಚು; ಸಚಿವ ಸೋಮಶೇಖರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಮೈಸೂರು:

ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2020ರ ಕಾರ್ಯಕ್ರಮವು ಸರಳವಾಗಿ, ಸಂಪ್ರದಾಯದಂತೆ ಬಹಳ ಅಚ್ಚುಕಟ್ಟಾಗಿ ನೆರವೇರಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸೂಕ್ತ ಪ್ರಚಾರ ನೀಡಿ ಪ್ರೋತ್ಸಾಹಿಸಿ ಸಹಕರಿಸಿದ ಎಲ್ಲಾ ಮಾಧ್ಯಮಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ. ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸೀಮಿತ ಸಂಖ್ಯೆಯ ಜನರಿಗೆ ಮಾತ್ರ ಅವಕಾಶ ನೀಡಿ ದಸರಾ ಆಚರಿಸುವಂತೆ ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಮಾರ್ಗಸೂಚಿಯಂತೆ ಸೀಮಿತ ಸಂಖ್ಯೆಯಲ್ಲಿ ಸೇರಿ ಆಚರಿಸಲಾಯಿತು ಎಂದರು.

ಸರಳವಾಗಿ ದಸರಾ ಆಚರಿಸಿದ್ದರೂ ಸಹ ಅರ್ಥಪೂರ್ಣವಾಗಿ ದಸರಾ ಆಚರಿಸಿದ್ದೇವೆ. ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ಯೋಧರಿಗೆ ಗೌರವ ಸಲ್ಲಿಸುವ ಕೆಲಸ ಕೂಡ ಈ ಬಾರಿ ಮಾಡಲಾಯಿತು. ಖ್ಯಾತ ವೈದ್ಯರಾದ ಡಾ. ಸಿ.ಎನ್. ಮಂಜುನಾಥ್ ಅವರು ದಸರಾ ಉದ್ಘಾಟನೆ ನೆರವೇರಿಸಿದರು. ವೈದ್ಯರೊಬ್ಬರು ದಸರಾ ಉದ್ಘಾಟಿಸಿರುವುದು ಸಹ ಇದೆ ಮೊದಲು. ವೈದ್ಯರು, ದಾದಿಯರು, ಆಶಾ ಕಾರ್ಯಕರ್ತರು, ಪೊಲೀಸರು, ಇನ್ನೂ ಅನೇಕ ವರ್ಗದವರು ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. ಅವರೆಲ್ಲರ ಪ್ರತಿನಿಧಿಗಳಿಗೆ ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಿ, ಕೊರೊನಾ ಯೋಧರಿಗೆ ಗೌರವ ಸಮರ್ಪಣೆ ಮಾಡಲಾಯಿತು ಎಂದು ವಿವರ ನೀಡಿದರು.

ಇತ್ತೀಚೆಗೆ ನಮ್ಮನ್ನು ಅಗಲಿದ ಖ್ಯಾತ ಗಾಯಕ, ಡಾ. ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನೆನಪಿನಲ್ಲಿ ಒಂದು ದಿನ ಕಾರ್ಯಕ್ರಮ ನಡೆಯಿತು. ಇದು ಸಹ ದಸರಾ ಮಹೋತ್ಸವದಲ್ಲಿ ಅಗಲಿದ ಗಣ್ಯರೊಬ್ಬರ ಹೆಸರಿನಲ್ಲಿ ನುಡಿನಮನ ಕಾರ್ಯಕ್ರಮ ಆಯೋಜಿರುವುದು ಸಹ ಇದೆ ಮೊದಲು. ಚಾಮುಂಡಿಬೆಟ್ಟ ಹಾಗೂ ಅರಮನೆ ಆವರಣಕ್ಕೆ ಸೀಮಿತವಾಗಿ ಈ ಬಾರಿ ದಸರಾ ಆಚರಿಸಲು ತೆಗೆದುಕೊಂಡ ನಿರ್ಧಾರದಂತೆ ಈ ಎರಡು ಸ್ಥಳಗಳಲ್ಲಿ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನೆರವೇರಿದೆ. ಪ್ರತಿವರ್ಷ ಸುಮಾರು 12 ರಿಂದ 15 ಆನೆಗಳು ಜಂಬುಸವಾರಿಯಲ್ಲಿ ಭಾಗವಹಿಸುತ್ತಿದ್ದವು. ಈ ವರ್ಷ ಸರಳವಾಗಿ ಆಚರಿಸಿದ್ದರಿಂದ 5 ಆನೆಗಳನ್ನು ಮಾತ್ರ ಕರೆಸಲಾಗಿತ್ತು. ಇದೆ ಮೊದಲ ಬಾರಿಗೆ ಅಭಿಮನ್ಯು ಚಿನ್ನದ ಅಂಬಾರಿ ಹೊತ್ತು ಯಶಸ್ವಿಯಾಗಿ ಜಂಬುಸವಾರಿ ನಡೆಸಿಕೊಟ್ಟಿದೆ ಎಂದರು.

ಕಳೆದ ವರ್ಷ 100 ಕಿ.ಮೀ. ಉದ್ದದ ದೀಪಾಲಂಕಾರ ಮಾಡಲಾಗಿತ್ತು. ಆದರೆ ಈ ವರ್ಷ ಸುಮಾರು 50 ಕಿ.ಮೀ.ಗೆ ಇಳಿಸಲಾಯಿತು. ನವರಾತ್ರಿಯ ದಿನಗಳಲ್ಲಿ ಹೆಚ್ಚು ಜನ ಒಂದೆಡೆ ಸೇರದಂತೆ ಎಲ್ಲಾ ಮುಂಜಾಗೃತಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಲಾಯಿತು. ಪರೀಕ್ಷೆ ಪ್ರಮಾಣ ಹೆಚ್ಚಾದರೂ ಸೋಂಕಿತರ ಸಂಖ್ಯೆಗೆ ಸೆಪ್ಟೆಂಬರ್‌ಗೆ ಹೋಲೊಸಿದರೆ ಕಡಿಮೆ ಬರುತ್ತಿರುವುದು ಸಮಾಧಾನಕರ ಸಂಗತಿ.

ಜಂಬುಸವಾರಿ ಮೆರವಣಿಗೆಯಲ್ಲಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ಒಂದು ಸ್ತಬ್ದಚಿತ್ರವನ್ನು ಸಹ ಸೇರಿಸಲಾಯಿತು.

ಈ ಸಾಲಿನ ದಸರಾವನ್ನು “ಸರಳ, ಸಾಂಪ್ರದಾಯಿಕ ಹಾಗೂ ವರ್ಚುವಲ್‌” ದಸರಾ ಎಂದು ಕರೆಯಲಾಗಿದೆ. ಅದರಂತೆ ಎಲ್ಲಾ ಕಾರ್ಯಕ್ರಮಗಳನ್ನು ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ ವರ್ಚುವಲ್ ಆಗಿ ಪ್ರಸಾರ ಮಾಡಲಾಯಿತು. ಲಕ್ಷಾಂತರ ಜನರು ದೂರದರ್ಶನದಲ್ಲಿ, ಫೇಸ್‌ ಬುಕ್‌ನಲ್ಲಿ, ಯೂಟ್ಯೂಬ್ ‌ನಲ್ಲಿ, ಹಲವಾರು ಮಾಧ್ಯಮಗಳಲ್ಲಿ, ಮಾಧ್ಯಮಗಳ ಸೋಷಿಯಲ್ ಮೀಡಿಯಾದಲ್ಲಿ ದಸರಾ ವೀಕ್ಷಣೆ ಮಾಡಿದ್ದಾರೆ.

ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೆಸ್‌ಬುಕ್ ಒಂದರಲ್ಲೇ ಜಂಬುಸವಾರಿ ಕಾರ್ಯಕ್ರಮವನ್ನು ಲಕ್ಷಾಂತರ ಜನ ನೋಡಿದ್ದಾರೆ. ಒಟ್ಟು ವಾರ್ತ ಇಲಾಖೆಯ ಫೇಸ್‌ಬುಕ್ ಪೇಜ್‌ನಲ್ಲಿ ಎಲ್ಲಾ ಕಾರ್ಯಕ್ರಮಗಳು ಸೇರಿ ಸುಮಾರು 6 ಲಕ್ಷ ವೀವ್ಸ್ ಆಗಿದೆ. ಇದಲ್ಲದೆ ಹಲವಾರು ಮಾಧ್ಯಮಗಳಿಗೆ ಡೈರೆಕ್ಟ್ ಲಿಂಕ್ ಕೊಡಲಾಗಿತ್ತು. ಅಲ್ಲಿಯೂ ಕೂಡ ಲಕ್ಷಾಂತರ ಜನರ ನೋಡಿ, ಸಂಭ್ರಮಿಸಿದ್ದಾರೆ.

ದಸರಾ ಆಯೋಜಿಸಲು ಸರ್ಕಾರದಿಂದ 10 ಕೋಟಿ ರೂ. ಅನುದಾನ ಮತ್ತು ಮುಡಾದಿಂದ 5 ಕೋಟಿ ರೂ. ಅನುದಾನ ಒದಗಿಸುವುದು ಎಂದು ನಿರ್ಧಾರವಾಗಿತ್ತು. ಆದರೆ ದಸರಾವನ್ನು ಸರ್ಕಾರ ನೀಡಿದ 10 ಕೋಟಿ ರೂ. ಅನುದಾನದಲ್ಲೇ ಪೂರ್ಣಗೊಳಿಸಲಾಗಿದ್ದು, ಮುಡಾ ಘೋಷಿಸಿದ್ದ 5 ಕೋಟಿ ರೂ. ಅನುದಾನವನ್ನು ಪಡೆದಿರುವುದಿಲ್ಲ. ಸರ್ಕಾರದ ಅನುದಾನದಲ್ಲೂ ಯಾವುದಕ್ಕೆ ಎಷ್ಟು ಖರ್ಚಾಗಿದೆ ಎಂಬುದನ್ನು ನವೆಂಬರ್ 1ರಂದು ತಿಳಿಸಲಾಗುವುದು.

ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮೈಸೂರು ರಾಜಮನೆತನ ಮಹಾರಾಣಿ ಪ್ರಮೋದಾದೇವಿ ಒಡೆಯರ್ ಅವರು, ಎಲ್ಲಾ ಜಲಪ್ರತಿನಿಧಿಗಳು, ಅಧಿಕಾರಿಗಳು, ಮೈಸೂರಿನ ಮಹಾಜನರು, ಸಂಪೂರ್ಣ ಸಹಕಾರ ನೀಡಿ, ಪ್ರೋತ್ಸಾಹಿಸಿದ್ದಾರೆ. ಅದಕ್ಕಾಗಿ ಅವರೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸೋಮಶೇಖರ್ ತಿಳಿಸಿದ್ದಾರೆ.

About the Author

The Bengaluru Live

Administrator

Visit Website View All Posts

Post navigation

Previous: ಯಡಿಯೂರಪ್ಪ ಪದಚ್ಯುತಗೊಳಿಸುವ ಪ್ರಸ್ತಾವವಿಲ್ಲ- ಪ್ರಲ್ಹಾದ್ ಜೋಶಿ
Next: 2021ರ ಆರಂಭದಲ್ಲೇ ರಾಜ್ಯಕ್ಕೆ ಸಿಗಲಿದೆ ಕೋವಿಡ್ ಲಸಿಕೆ : ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Related Stories

ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM
ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM

Latest Post

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

November 18, 2026 10:49 AM
ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

November 18, 2026 7:04 AM
ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

November 18, 2026 5:12 AM
ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM

ನೀವು ತಪ್ಪಿಸಿಕೊಂಡಿರಬಹುದು

ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM
ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM
ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ
  • ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ
  • ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ
  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
©Copyright 2025 The Bengaluru Live All rights reserved. | MoreNews by AF themes.