Home Uncategorized ಯಾದಗಿರಿ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು, 30ಕ್ಕೂ ಹೆಚ್ಚು ಮಂದಿಗೆ ವಾಂತಿ-ಭೇದಿ, ಆಸ್ಪತ್ರೆಗೆ ದಾಖಲು

ಯಾದಗಿರಿ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು, 30ಕ್ಕೂ ಹೆಚ್ಚು ಮಂದಿಗೆ ವಾಂತಿ-ಭೇದಿ, ಆಸ್ಪತ್ರೆಗೆ ದಾಖಲು

21
0

ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ: ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದ ನಿವಾಸಿ 35 ವರ್ಷದ ಸಾವಿತ್ರಮ್ಮ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಕಲುಷಿತ ನೀರು ಸೇವಿಸಿದ್ದ 30ಕ್ಕೂ ಹೆಚ್ಚು ಮಂದಿಗೆ ವಾಂತಿ, ಭೇದಿಯಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿದ್ದರಿಂದ ನೀರು ಕಲುಷಿತಗೊಂಡಿತ್ತು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಆ್ಯಂಬುಲೆನ್ಸ್-ಟೆಂಪೊ ನಡುವೆ ಅಪಘಾತ, 8 ಮಂದಿಗೆ ಗಾಯ

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ತೆಲಂಗಾಣದ ನಾರಾಯಣಪೇಟೆನಲ್ಲಿ 8, ಮೈಬೂಬನಗರದ ಖಾಸಗಿ ಆಸ್ಪತ್ರೆಗೆ 4 ವರ್ಷದ ಬಾಲಕ ದಾಖಲಾಗಿದ್ದಾನೆ. ಯಾದಗಿರಿ ಜಿಲ್ಲಾಸ್ಪತ್ರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 13 ಜನರ ಆರೋಗ್ಯ ಸ್ಥಿರವಾಗಿದೆ ಎಂದು ಡಿಹೆಚ್​ಒ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here