Home Uncategorized ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿಲ್ಲ: ಪ್ರಹ್ಲಾದ್ ಜೋಶಿ

ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿಲ್ಲ: ಪ್ರಹ್ಲಾದ್ ಜೋಶಿ

13
0
bengaluru

ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನನಮತಿರು ನರೇಂದ್ರ ಮೋದಿ ಅವರು ರೋಡ್ ಶೋ ನಡೆಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ. ಧಾರವಾಡ: ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನನಮತಿರು ನರೇಂದ್ರ ಮೋದಿ ಅವರು ರೋಡ್ ಶೋ ನಡೆಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ.

ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಹಿನ್ನೆಲೆ ರೈಲ್ವೇ ಮೈದಾನಕ್ಕೆ ಭೇಟಿ ನೀಡಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿರುವ ಮೋದಿಯವರು, ಪ್ರತಿ ಕಿಲೋ ಮೀಟರ್‌ಗೆ ಒಂದು ಕಡೆ ಜನರನ್ನು ಭೇಟಿಯಾಗುತ್ತಾರೆ. ಒಟ್ಟು ಎಂಟು ಕಡೆ ಜನರನ್ನ ಮೋದಿ ಭೇಟಿಯಾಗುತ್ತಾರೆಂದು ಹೇಳಿದರು.

ಇದನ್ನೂ ಓದಿ: ರಾಷ್ಟ್ರೀಯ ಯುವಜನೋತ್ಸವ: ಹುಬ್ಬಳ್ಳಿಗಿಂದು ಪ್ರಧಾನಿ ಮೋದಿ, ಎಲ್ಲೆಡೆ ಬಿಗಿ ಭದ್ರತೆ, ಸಂಚಾರ ಮಾರ್ಗ ಬದಲಾವಣೆ

ರಾಷ್ಟ್ರೀಯ ಯುವಜನೋತ್ಸವಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಇದೊಂದು ಅಭೂತಪೂರ್ವ ಕಾರ್ಯಕ್ರಮವಾಗಿದೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ದೊಡ್ಡ ಪ್ರಮಾಣದಲ್ಲಿ ನೋಂದಣಿಯಾಗಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಯಾರೇ ಬಂದರೂ ಒಳಗೆ ಬಿಡುವುದಕ್ಕೆ ಸೂಚಿಸಲಾಗಿದೆ. ಇನ್ನು ಜಿಮ್ ಖಾನಾ ಕ್ಲಬ್‌ನಲ್ಲಿ ಎಲ್‌ಇಡಿ ವ್ಯವಸ್ಥೆ ಮಾಡಲಾಗಿದೆ. ನ ಭೂತೋ ನ ಭವಿಷ್ಯತಿ ಅನ್ನೋ ರೀತಿಯಲ್ಲಿ ವ್ಯವಸ್ಥೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಲಕ್ಷಾಂತರ ಜ‌ನರು ಬರುತ್ತಿದ್ದಾರೆ. ಪ್ರಧಾನಿ ಮೋದಿ ಬರುತ್ತಿರುವುದು ಜ‌ನತೆಯ ಸಂತೋಷಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಯಾವುದೇ ರೀತಿ ರೋಡ್ ಶೋ ನಡೆಸುತ್ತಿಲ್ಲ. ದಾರಿಯಲ್ಲಿ ಜನರನ್ನ ಭೇಟಿಯಾಗುತ್ತಾರಷ್ಟೆ. ಇದು ಅಖಿಲ ಭಾರತ ಮಟ್ಟದ ಕಾರ್ಯಕ್ರಮವಾಗಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಎಲ್ಲಾ ನಾಯಕರ ಹೆಸರು ಹಾಕಲಾಗಿತ್ತು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರು ಕೈಬಿಡಲಾಗಿತ್ತು ಎಂಬುದು ನನ್ನ ಗಮನಕ್ಕೆ ಬಂದ ಕೂಡಲೇ ಅದನ್ನು ಸರಿಮಾಡುವ ಕೆಲಸ ಮಾಡಲಾಯಿತು ಎಂದರು.

LEAVE A REPLY

Please enter your comment!
Please enter your name here