Home Uncategorized ರಸ್ತೆ ಅಪಘಾತ: ಚಿಕ್ಕಪ್ಪನ ಅಂತ್ಯಸಂಸ್ಕಾರಕ್ಕೆ ಬಂದವರಿಗೆ ಊಟ ತರಲು ಹೋಗಿದ್ದ 9ನೇ ತರಗತಿ ಬಾಲಕ ಸಾವು

ರಸ್ತೆ ಅಪಘಾತ: ಚಿಕ್ಕಪ್ಪನ ಅಂತ್ಯಸಂಸ್ಕಾರಕ್ಕೆ ಬಂದವರಿಗೆ ಊಟ ತರಲು ಹೋಗಿದ್ದ 9ನೇ ತರಗತಿ ಬಾಲಕ ಸಾವು

8
0
bengaluru

ಚಿಕ್ಕಪೇಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಂಗಳೂರು: ಚಿಕ್ಕಪೇಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಧನುಷ್ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಕಾಟನ್‌ಪೇಟೆಯ ಭಕ್ಷಿ ಗಾರ್ಡನ್‌ನ ನಿವಾಸಿಯಾಗಿದ್ದನು.

ಧನುಷ್ ಅವರ ಚಿಕ್ಕಪ್ಪ ಶನಿವಾರ ನಿಧನರಾಗಿದ್ದರು ಮತ್ತು ಸಂಬಂಧಿಕರು ಅಂತಿಮ ನಮನ ಸಲ್ಲಿಸಲು ಮನೆಗೆ ಬಂದಿದ್ದರು. ಈ ವೇಳೆ ಧನುಷ್ ತನ್ನ ಸ್ನೇಹಿತ ಹಿತೇಶ್ ಜೊತೆಗೆ ಕುಟುಂಬ ಸದಸ್ಯರು ಮತ್ತು ಸಂಬಂಧಿಕರಿಗೆ ಊಟ ತರಲು ಹೋಟೆಲ್‌ಗೆ ಹೋಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಗುಡ್ ಶೆಡ್ ರಸ್ತೆ ಬಳಿ ಧನುಷ್ ವಾಹನದ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ಆತನಿಗೆ ಗಂಭೀರ ಗಾಯಗಳಾಗಿದ್ದು, ಆತನ ಸ್ನೇಹಿತ ಸಣ್ಣ ಪ್ರಮಾಣದ ಗಾಯಗಳೊಂದಿಗೆ ಪಾರಾಗಿದ್ದಾನೆ. 

bengaluru

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆ ದಿನವೇ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ!

ಧನುಷ್‌ನನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೂ, ಚಿಕಿತ್ಸೆಗೆ ಸ್ಪಂದಿಸದೆ ಧನುಷ್ ಅಲ್ಲಿ ಕೊನೆಯುಸಿರೆಳೆದಿದ್ದಾನೆ. ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ ಮತ್ತು ಸಂತ್ರಸ್ತ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಚಿಕ್ಕಪೇಟೆ ಸಂಚಾರ ಪೊಲೀಸರು ತಿಳಿಸಿದ್ದಾರೆ.

bengaluru

LEAVE A REPLY

Please enter your comment!
Please enter your name here