ಕೋಟಾ (ರಾಜಸ್ಥಾನ): ರಾಜಸ್ಥಾನದ ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿಯು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವರ್ಷದಲ್ಲಿ ಇದು ನಾಲ್ಕನೆಯ ಪ್ರಕರಣವಾಗಿದೆ. ಕಳೆದ ವರ್ಷ ಒಟ್ಟು 29 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು ಎಂದು indiatoday. in ವರದಿ ಮಾಡಿದೆ.
12ನೇ ತರಗತಿ ವ್ಯಾಸಂಗ ಮಾಡುತ್ತಾ, ಜೆಇಇ ಪರೀಕ್ಷೆಗೂ ಸಿದ್ಧವಾಗುತ್ತಿದ್ದ ವಿದ್ಯಾರ್ಥಿಯು ತನ್ನ ಕೋಣೆಯಲ್ಲಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.
ಬೆಳಗ್ಗೆ ತಮ್ಮ ಪುತ್ರನ ಕರೆ ಬಾರದಿರುವುದರಿಂದ ಕಳವಳಗೊಂಡಿರುವ ಪೋಷಕರು ವಾರ್ಡನ್‌ರನ್ನು ಸಂಪರ್ಕಿಸಿದಾಗ, ಸದರಿ ವಿದ್ಯಾರ್ಥಿಯು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ, ನೇಣು ಬಿಗಿದುಕೊಂಡ ಸ್ಥಿತಿಯಲ್ಲಿದ್ದ ವಿದ್ಯಾರ್ಥಿ ಕಂಡು ಬಂದಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.