Home Uncategorized ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಹಿಂದಿನ ಸಿದ್ದರಾಮಯ್ಯ ಸರ್ಕಾರ ಅನುದಾನ ಕೊಟ್ಟಿಲ್ಲ: ಸಿಎಂ ಬೊಮ್ಮಾಯಿ

ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಹಿಂದಿನ ಸಿದ್ದರಾಮಯ್ಯ ಸರ್ಕಾರ ಅನುದಾನ ಕೊಟ್ಟಿಲ್ಲ: ಸಿಎಂ ಬೊಮ್ಮಾಯಿ

13
0

ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಬೆಳಗಾವಿ ಜಿಲ್ಲೆಯ ರಾಜಹಂಸಗಡ ಕೋಟೆಯಲ್ಲಿ ನಿರ್ಮಿಸಿರುವ ಶಿವಾಜಿ ಪ್ರತಿಮೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಮತ್ತು ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ(Ramesh Jarkiholi) ನಡುವೆ ಪ್ರತಿಷ್ಠೆಯ ವಿಷಯವಾಗಿತ್ತು.  ಬೆಳಗಾವಿ: ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಬೆಳಗಾವಿ ಜಿಲ್ಲೆಯ ರಾಜಹಂಸಗಡ ಕೋಟೆಯಲ್ಲಿ ನಿರ್ಮಿಸಿರುವ ಶಿವಾಜಿ ಪ್ರತಿಮೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಮತ್ತು ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ(Ramesh Jarkiholi) ನಡುವೆ ಪ್ರತಿಷ್ಠೆಯ ವಿಷಯವಾಗಿತ್ತು. 

ಮಾರ್ಚ್ 5ರಂದು ಶಿವಾಜಿ ಪ್ರತಿಮೆ ಅನಾವರಣಗೊಳಿಸುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡು ಬರುತ್ತಿದ್ದರು. ಕಾರ್ಯಕ್ರಮವನ್ನೂ ಆಯೋಜನೆ ಮಾಡಿದ್ದರು. ಕಾಂಗ್ರೆಸ್ ನ ಪ್ರಮುಖ ನಾಯಕರಿಗೆ ಆಹ್ವಾನವನ್ನೂ ನೀಡಿದ್ದರು. ಆದರೆ ರಮೇಶ್ ಜಾರಕಿಹೊಳಿಯವರು ಸರ್ಕಾರದ ವತಿಯಿಂದ ಕಾರ್ಯಕ್ರಮ ಇಂದು ಏರ್ಪಡಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಉದ್ಘಾಟನೆ ಮಾಡಿಸಿಯೇ ಬಿಟ್ಟಿದ್ದಾರೆ.

ಇಂದು ಬೆಳಗ್ಗೆ ಶಿವಾಜಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದ್ದಾರೆ. 3.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 50 ಅಡಿ ಎತ್ತರದ ಶಿವಾಜಿ ಪ್ರತಿಮೆ ಎದುರು ನಗಾರಿ ಬಾರಿಸಿ ಪ್ರತಿಮೆಗೆ ಹೂವು ಸಮರ್ಪಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ್ ಜಾರಕಿಹೊಳಿ, ಅಭಯ್ ಪಾಟೀಲ್, ಅನಿಲ್ ಬೆನಕೆ ಭಾಗಿ‌ಯಾಗಿದ್ದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೈರಾಗಿದ್ದರು. ಅವರಿಗೆ ಸರ್ಕಾರದ ವತಿಯಿಂದ ಆಹ್ವಾನ ಹೋಗಿತ್ತು. ಬೆಳಗಾವಿ ಜಿಲ್ಲೆಯ ರಾಜಹಂಸಗಢದಲ್ಲಿ ಮುಖ್ಯಮಂತ್ರಿ @BSBommai ಅವರು ಇಂದು ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಹಾಗೂ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಚಿವರಾದ @GovindKarjol, ಸಂಸದರಾದ ಮಂಗಳಾ ಅಂಗಡಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮತ್ತಿತರರು ಹಾಜರಿದ್ದರು. pic.twitter.com/5YK0PlBiRn— CM of Karnataka (@CMofKarnataka) March 2, 2023
ರಾರಾಜಿಸಿದ ಫ್ಲೆಕ್ಸ್ ಗಳು: ರಾಜಹಂಸಗಡ ಕೋಟೆಯಲ್ಲಿ ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಸಹ ಸಿಎಂ ಸಮ್ಮುಖದಲ್ಲಿ ಉದ್ಘಾಟನೆ ಮಾಡಲಾಗಿದೆ. ಗಾರ್ಡನ್, ಕೋಟೆ ನವೀಕರಣ, ನೀರಿನ ವ್ಯವಸ್ಥೆ ಸೇರಿದಂತೆ ಹಲವು ಕಾರ್ಯಕ್ರಮ ಉದ್ಘಾಟಿಸಲಾಗಿದೆ. ಇನ್ನು ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿವಾಜಿ ಈ ದೇಶ ಕಂಡ ಅಪ್ರತಿಮ ನಾಯಕ‌. ಬೆಳಗಾವಿಯ ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಲಾಗಿದೆ.

ಹಿಂದೂ ಸಾಮ್ರಾಜ್ಯ ಉಳಿಸಲು ಶಿವಾಜಿ ಮಹಾರಾಜರ ಪಾತ್ರ ದೊಡ್ಡದು. ತಮ್ಮ ಹೃದಯದಲ್ಲಿ ಛಲ, ಧೈರ್ಯ ಎಲ್ಲವನ್ನೂ ತುಂಬಿಕೊಂಡಿದ್ದರು. ದೇಶ ಕಾಪಾಡಲು ಮೊಟ್ಟ ಮೊದಲು ಹೋರಾಟ ಮಾಡಿದ್ದು ಶಿವಾಜಿ. ರಾಜಹಂಸಗಡ ಶಿವಾಜಿ ಮಹಾರಾಜರು ಕಟ್ಟಿದ ಕೋಟೆ. ಅಭಿವೃದ್ಧಿಗಾಗಿ 2008ರಲ್ಲೇ B.S​.ಯಡಿಯೂರಪ್ಪ ಅನುದಾನ ನೀಡಿದ್ದರು. 2008ರಲ್ಲೇ 4.5 ಕೋಟಿ ರೂಪಾಯಿ ಬಿಡುಗಡೆ ಆಗಿತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯನವರ ಅವಧಿಯಲ್ಲಿ ಅಭಿವೃದ್ಧಿ ಆಗಲ್ಲ, ಅವರಿಗೆ ಮಾತಾಡುವುದೇ ಕೆಲಸ. ಕೋಟೆ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ ಕೊಡುತ್ತೇನೆ ಎಂದು ಘೋಷಿಸಿದರು.

ರಾಜಹಂಸಗಡದ ಕೋಟೆಗೆ ತೆರಳುವ ಮಾರ್ಗದಲ್ಲಿ ದೊಡ್ಡಮಟ್ಟದಲ್ಲಿ ಫ್ಲೆಕ್ಸ್ ಗಳು ರಾರಾಜಿಸಿದ್ದವು. ಲಕ್ಷ್ಮಿ ಹೆಬ್ಬಾಳ್ಕರ್, ಸಂಜಯ್ ಪಾಟೀಲ್, ರಮೇಶ್ ಜಾರಕಿಹೊಳಿ ಬೆಂಬಲಿಗರು ಫ್ಲೆಕ್ಸ್ ಹಾಕಿದ್ದರು. ಮಾರ್ಗಮಧ್ಯೆ ಇರುವ ಲಕ್ಷ್ಮಿ ಹೆಬ್ಬಾಳ್ಕರ್ ಭಾವಚಿತ್ರದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು.

LEAVE A REPLY

Please enter your comment!
Please enter your name here